ಘಟನೆಯ ಸ್ಥಳ 
ದೇಶ

ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲೇ ಆರು ಮಂದಿ ಸಾವು | Accident

ಹೈದರಾಬಾದ್: ತೆಲಂಗಾಣದ ಶಂಶಾಬಾದ್ ORRನಲ್ಲಿ ನಿಂತಿದ್ದ ಲಾರಿಗೆ ಹಿಂದೆಯಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ(Accident) ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಶುಕ್ರವಾರ(ಮೇ 01) ರಂಗಾರೆಡ್ಡಿ ಜಿಲ್ಲೆಯ ಶಂಶಾಬಾದ್ ಓಆರ್‌ಆರ್‌ನಲ್ಲಿ ಘಟನೆ ನಡೆದಿದೆ. ಯದಾದ್ರಿಗೆ ಹಿಂತಿರುಗುತ್ತಿದ್ದಾಗ ಅಬಕಾರಿ ಗೇಟ್ -16 ರಲ್ಲಿ ನಿಲ್ಲಿಸಿದ್ದ ಲಾರಿಗೆ TS 23 F 2298 ಸಂಖ್ಯೆಯ ಕಾರು ಡಿಕ್ಕಿ ಹೊಡೆದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಲಾರಿಯ ಹಿಂಭಾಗದಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಕ್ರೇನ್ ಸಹಾಯದಿಂದ ಹೊರ ತೆಗೆದಿದ್ದಾರೆ.
ಘಟನೆಯಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿ ಆರು ಜನ ಸಾವನ್ನಪ್ಪಿದ್ದಾರೆ. ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಮೃತರನ್ನು ಸಿರಿಸಿಲ್ಲಾ ಜಿಲ್ಲೆಯ ಶ್ರೀನಿವಾಸ್, ಶಿವ, ಕೃಷ್ಣಚಂದ್ರ, ಮಾಧವ್, ರಿಷಿಕಾ ಮತ್ತು ಇನ್ನೋರ್ವ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಗಾಯಗೊಂಡ ಬಾಲಕಿಯ ಹೆಸರು ತಿಳಿದುಬಂದಿಲ್ಲ.

ಚೆವೆಲ್ಲಾ ಡಿಸಿಪಿ ಯೋಗೇಶ್ ಗೌತಮ್ ಘಟನಾ ಸ್ಥಳವನ್ನು ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ (ಏಜೆನ್ಸೀಸ್).