ಘಟನೆಯ ಸ್ಥಳ 
ದೇಶ

ಭೀಕರ ಅಪಘಾತ; ರಸ್ತೆ ಬದಿ ಕೆಲಸ ಮಾಡ್ತಿದ್ದ ಮಹಿಳೆಯರ ಮೇಲೆ ಹರಿದ ಕಾರು; ಐವರು ಮಹಿಳೆಯರು ಸಾವು, ಹಲವರಿಗೆ ಗಾಯ | Accident

ಭೋಪಾಲ್: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ರಸ್ತೆ ಬದಿಯಲ್ಲಿ ಕೆಲಸ ಮಾಡ್ತಿದ್ದ ಮಹಿಳಾ ಕಾರ್ಮಿಕರ ಮೇಲೆ ಕಾರು ಹರಿದು ಭೀಕರ ಅಪಘಾತ ಸಂಭವಿಸಿದ್ದು, ಐವರು ಮಹಿಳೆಯರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಮಂಗಳವಾರ(ಜ. 20) ವರದಿಯಾಗಿದೆ.
ಜಬಲ್ಪುರ ಜಿಲ್ಲೆಯ ಬರೇಲಾದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಇಬ್ಬರು ಮಹಿಳೆರು ಸಾವನ್ನಪ್ಪಿದ್ರೆ, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಆರೋಪಿ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಕುರಿತು ಮಾತನಾಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೂರ್ಯಕಾಂತ್ ಶರ್ಮಾ, ಬರೇಲಾದಲ್ಲಿ ಹಿಟ್ ಅಂಡ್ ರನ್ ಸಂಭವಿಸಿ ಐವರು ಮಹಿಳೆಯರು ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿ ಆರೋಪಿಯನ್ನು ಬಂಧಿಸಬೇಕು. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಘಟನೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರಿಗೆ ತಲಾ 10 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 2.5 ರೂ. ಹಾಗೂ ಸಣ್ಣಪುಟ್ಟ ಗಾಯಗಳಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ (ಏಜೆನ್ಸೀಸ್).