ಆಂಧ್ರಪ್ರದೇಶ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಐದು ಜನರು ಸ್ಥಳದಲ್ಲೇ ಮೃತಟ್ಟಿರುವ ಘಟನೆ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಮಂಡಲದ ಕೋಟೆಕಲ್ ಬಳಿ ಶನಿವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಕೋಲಾರದ ಚಿಕ್ಕಹೊಸಳ್ಳಿ ಗ್ರಾಮಕ್ಕೆ ಸೇರಿದವರು ಎಂದು ಗುರುತಿಸಲಾಗಿದೆ. ಈ ಕುಟುಂಬಸ್ಥರು ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿಯ ದರ್ಶನ ಮುಗಿಸಿಕೊಂಡು ಊರಿನ ಕಡೆಗೆ ವಾಪಸ್ ಹಿಂತುರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.