ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಇಂದು(ಡಿ. 22) ಬೆಳಿಗ್ಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.
ಜಾಯ್‌ಪುರ ಪೊಲೀಸ್ ಠಾಣೆ ಪ್ರದೇಶದ ಸೌರಿಯಾ ಗ್ರಾಮದಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೃತರನ್ನು ದುರ್ಜೋಧನ್ ಡೊಲುಯಿ(72), ಅವರ ಮಗ ದೂಧಕುಮಾರ್ ಡೊಲುಯಿ(45), ಸೊಸೆ ಶಿಬಾನಿ ಡೊಲುಯಿ(40) ಹಾಗೂ ಮೊಮ್ಮಗಳು ಶಂಪಾ ಡೊಲುಯಿ(15) ಎಂದು ಗುರುತಿಸಲಾಗಿದೆ.
ಈ ಕುರಿತು ಮಾತನಾಡಿರುವ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಕುಚ್ಚಾ ಮನೆಗೆ ಹೇಗೆ ಬೆಂಕಿ ಹೊತ್ತಿಕೊಂಡಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಎರಡು ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಿವೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಉಲುಬೇರಿಯಾದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).