ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದ್ಯಾರ್ಥಿಯೊಬ್ಬನ ಲಗೇಜ್ ಪರಿಶೀಲನೆ ವೇಳೆ ಬ್ಯಾಗ್ನಲ್ಲಿ ಮಾನವ ಅಸ್ತಿ ಪಂಜರ ಪತ್ತೆಯಾಗಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಆಘಾತಕ್ಕೊಳಗಾದ ಘಟನೆ ಗುರುವಾರ(ಜ. 22) ನಡೆದಿದೆ.
ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಭದ್ರತಾ ಸಿಬ್ಬಂದಿ ಪ್ರಯಾಣಿಕರ ಲಗೇಜ್‌ಗಳನ್ನು ಪರಿಶೀಲಿಸುವಾಗ ವಿದ್ಯಾರ್ಥಿಯೊಬ್ಬರ ಬ್ಯಾಗ್ನಲ್ಲಿ ಅಸ್ತಿ ಪಂಜರ ಪತ್ತೆಯಾಗಿದೆ. ಈ ವೇಳೆ ಏರ್ಪೋರ್ಟ್ನ ಭದ್ರತಾ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ದಳಕ್ಕಾಗಮಿಸಿ ಪರಿಶೀಲಿಸಿದ ಬಳಿಕ ಅದು ಒರಿಜಿನಲ್ ಅಸ್ತಿಪಂಜರ ಅಲ್ಲ, ವೈದ್ಯಕೀಯ ವಿದ್ಯಾರ್ಥಿಗಳು ಬಳಸುವ ಮಾದರಿ ಎಂದು ತಿಳಿದು ಬಂದಿದೆ.
ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಯೊಬ್ಬರು, ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಇಂತಹ ಡೆಮೊ ಅಸ್ಥಿಪಂಜರಗಳನ್ನು ಬಳಸಲಾಗುತ್ತದೆ. ಆದರೂ ಹೆಚ್ಚಿನ ದೃಢೀಕರಣಕ್ಕಾಗಿ ಅಸ್ಥಿಪಂಜರವನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).