ನವದೆಹಲಿ: ಜಪಾನ್ ದೇಶವನ್ನು ಹಿಂದಿಕ್ಕಿ 4.18 ಟ್ರಿಲಿಯನ್ ಡಾಲರ್ ಮೌಲ್ಯದೊಂದಿಗೆ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ರಾಷ್ಟ್ರವಾಗಿ(4th largest economy) ಭಾರತ ಹೊರಹೊಮ್ಮಿದ್ದು, ಮುಂದಿನ ಮೂರು ವರ್ಷಗಳಲ್ಲಿ ಜರ್ಮನಿಯನ್ನು ಹಿಂದಿಕ್ಕಿ 3ನೇ ಅತಿದೊಡ್ಡ ಆರ್ಥಿಕತೆ ಹೊಂದುವ ಸಾಧ್ಯತೆಯಿಂದ ಎಂದು ಮಂಗಳವಾರ(ಡಿ. 30) ಕೇಂದ್ರ ಸರ್ಕಾರ ಹೇಳಿದೆ.
ಸರ್ಕಾರಿ ಆರ್ಥಿಕ ಸಂಕ್ಷಿಪ್ತ ಟಿಪ್ಪಣಿ ಪ್ರಕಾರ, 4.18 ಟ್ರಿಲಿಯನ್ ಡಾಲರ್ ಜಿಡಿಪಿಯೊಂದಿಗೆ, ಭಾರತವು ಜಪಾನ್ ಅನ್ನು ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಮುಂದಿನ 2.5 ರಿಂದ 3 ವರ್ಷಗಳಲ್ಲಿ 2030ರ ವೇಳೆಗೆ 7.3 ಟ್ರಿಲಿಯನ್ ಡಾಲರ್ ಜಿಡಿಪಿಯೊಂದಿಗೆ ಜರ್ಮನಿಯನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೆ ಜಿಗಿಯಲಿದೆ ಎಂದು ಹೇಳಿದೆ.
ಯುಎಸ್ ವಿಶ್ವದ ಅತಿದೊಡ್ಡ ಆರ್ಥಿಕತೆಯಾಗಿದ್ದು, ಚೀನಾ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. 2025-26ರ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಆರು ತ್ರೈಮಾಸಿಕಗಳ ಗರಿಷ್ಠ ಮಟ್ಟಕ್ಕೆ ವಿಸ್ತರಿಸುವುದರೊಂದಿಗೆ ಬೆಳವಣಿಗೆಯ ವೇಗ ಏರಿಕೆಯಾಗಿದೆ. ಇದು ನಿರಂತರ ಜಾಗತಿಕ ವ್ಯಾಪಾರ ಅನಿಶ್ಚಿತತೆಗಳ ನಡುವೆಯೂ ಭಾರತದ ಸ್ಥಿತಿಸ್ಥಾಪಕತ್ವವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದೆ.
2025-26ರ ಎರಡನೇ ತ್ರೈಮಾಸಿಕದಲ್ಲಿ ಭಾರತದ ನೈಜ GDP 8.2% ರಷ್ಟು ಬೆಳವಣಿಗೆ ಕಂಡಿದೆ. ಕಳೆದ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 7.8% ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ 7.4% ರಷ್ಟಿತ್ತು.
ವಿಶ್ವಬ್ಯಾಂಕ್ 2026 ರಲ್ಲಿ ಶೇಕಡಾ 6.5 ರಷ್ಟು ಬೆಳವಣಿಗೆಯನ್ನು ನಿರೀಕ್ಷಿಸಿದೆ. ಭಾರತವು 2026ರಲ್ಲಿ ಶೇಕಡಾ 6.4 ಮತ್ತು 2027ರಲ್ಲಿ ಶೇಕಡಾ 6.5 ರಷ್ಟು ಬೆಳವಣಿಗೆಯೊಂದಿಗೆ ವೇಗವಾಗಿ ಬೆಳೆಯುತ್ತಿರುವ ಜಿ 20 ಆರ್ಥಿಕತೆಯಾಗಿ ಉಳಿಯುತ್ತದೆ ಎಂದು ಮೂಡೀಸ್ ಆಶವಾದವನ್ನು ಹೊಂದಿದೆ ಎನ್ನಲಾಗಿದೆ (ಏಜೆನ್ಸೀಸ್).