ಅಭಿಜಿತ್ ದೀಪ್ಕೆ, ಆಶುತೋಷ್ ರಾಂಕಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ!
- NEET ಪರೀಕ್ಷಾ ಅಕ್ರಮ ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಪುನರಾರಂಭ
- ಅಭಿಜಿತ್ ದೀಪ್ಕೆ, ಆಶುತೋಷ್ ರಾಂಕಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ!
- ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಕೇಳಿದ ದೆಹಲಿ ಹೈಕೋರ್ಟ್
ನವದೆಹಲಿ: ನೀಟ್ ಸೇರಿದಂತೆ ದೇಶದಲ್ಲಿ ನಡೆದಿರುವ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ, ಕಾಕ್ರೋಚ್ ಜನತಾ ಪಾರ್ಟಿ ಸೋಮವಾರ (ಜು.20) ಜಂತರ್-ಮಂತರ್ (Jantar Mantar Protest) ನಿಂದ ಸಂಸತ್ ಭವನದವರೆಗೆ ಪ್ರತಿಭಟನಾ ರ‍್ಯಾಲಿಯನ್ನು ಆಯೋಜನೆ ಮಾಡಿತ್ತು.
ಈ ಪ್ರತಿಭಟನೆಯನ್ನು ಗಮನಿಸಿದ ಕೇಂದ್ರ ಸರ್ಕಾರವು ಸಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಿತು. ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಸಂವಾದ ನಡೆಸಿದ ಕಾಕ್ರೋಚ್ ವಕ್ತಾರರು, ತಮ್ಮ ಬೇಡಿಕೆಗಳನ್ನು ಸಚಿವರ ಬಳಿ ತಿಳಿಸಿದ್ದಾರೆ.
ನಿನ್ನೆ ನಡೆದ ಪ್ರತಿಭಟನಾ ರ‍್ಯಾಲಿ ನಂತರ ಇಂದು (ಮಂಗಳವಾರ, ಜು.21) ಸಿಜೆಪಿ ಸ್ಥಾಪಕ ಅಭಿಜಿತ್ ದೀಪ್ಕೆ, ಆಶುತೋಷ್ ರಾಂಕಾ ನೇತೃತ್ವದಲ್ಲಿ ಮತ್ತೆ ಹೋರಾಟ ಪ್ರಾರಂಭವಾಗಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆಂದ ತಿಳಿದು ಬಂದಿದೆ.
ಮತ್ತೊಮ್ಮೆ ಹೋರಾಟ!
ಸೋಮವಾರ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ಅನೇಕ ಕಡೆಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನಲೆ ಇಂದು ಅಭಿಜಿತ್ ದೀಪ್ಕೆ ಮತ್ತು ಆಶುತೋಷ್ ರಾಂಕಾ ಜಂತರ್ ಮಂತರ್ ನಲ್ಲಿ ಕುಳಿತುಕೊಂಡು ಹೋರಾಟವನ್ನು ಮುಂದುವರಿಸಿದ್ದಾರೆ.
ಬೆಳಿಗ್ಗೆ ದೆಹಲಿಯಲ್ಲಿ ಮಳೆ ಬಂದ ಕಾರಣ ಜನರ ಸಂಖ್ಯೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯೇ ಇತ್ತು ಎಂದು ಹೇಳಲಾಗುತ್ತಿದ್ದು, ಈಗ ಮತ್ತೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ತಿಳಿದು ಬಂದಿದೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್!
ನಿನ್ನೆ ನಡೆದ ಹೋರಾಟದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಹಿನ್ನಲೆ, ಪೊಲೀಸರು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗವನ್ನು ಮಾಡಲಾಗಿತ್ತು. ಕೆಲ ಕಡೆ ಪ್ರತಿಭಟನಾಕಾರರು ಕೂಡ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ್ದರು. ಹೀಗಾಗಿ ಇಂದು ಜಂತರ್ ಮಂತರ್ ಸುತ್ತಮುತ್ತ ಬಿಗಿ ಪೊಲೀಸ್ ವ್ಯವಸ್ಥೆಯನ್ನು ನಿಯೋಜನೆ ಮಾಡಲಾಗಿದೆ.
ವಾಂಗ್‌ಚುಕ್ ಆರೋಗ್ಯ ಸ್ಥಿತಿ ಮಾಹಿತಿ ಕೇಳಿದ ಹೈಕೋರ್ಟ್
ಈ ಹೋರಾಟವನ್ನು ಬೆಂಬಲಿಸಿ, ಪರಿಸರವಾದಿ ಸೋನಮ್ ವಾಂಗ್‌ಚುಕ್ ಕಳೆದ 23 ದಿನಗಳಿಂದ ಉಪವಾಸ ನಡೆಸುತ್ತಿದ್ದು, ಪ್ರಸ್ತುತ ಅವರು ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಹೇಗಿದೆ? ಯಾವ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ? ಎಂದು ಆಸ್ಪತ್ರೆ ಸಿಬ್ಬಂದಿ ನ್ಯಾಯಪೀಠಕ್ಕೆ ಸಲ್ಲಿಸಬೇಕೆಂದು ದೆಹಲಿ ಹೈಕೋರ್ಟ್ ಆದೇಶಿಸಿದೆ ಎಂದು ತಿಳಿದು ಬಂದಿದೆ, (ಏಜನ್ಸೀಸ್).