JSSC-CGL ಪರೀಕ್ಷೆ ರದ್ದು ಖಂಡಿಸಿ ಅಭ್ಯರ್ಥಿಗಳ ಪ್ರತಿಭಟನೆ
- JSSC-CGL ಪರೀಕ್ಷೆ ರದ್ದು ಖಂಡಿಸಿ ಅಭ್ಯರ್ಥಿಗಳ ಪ್ರತಿಭಟನೆ
- ಸುಮಾರು 2 ಸಾವಿರ ವಿದ್ಯಾರ್ಥಿಗಳಿಂದ ಬೃಹತ್ ಹೋರಾಟ
- ಕಾನೂನು ಹೋರಾಟಕ್ಕೆ ಅವಕಾಶವಿದೆ ಎಂದ ಸಚಿವರು
JSSC-CGL exam cancelled: ಜಾರ್ಖಂಡ್‌ನಲ್ಲಿ ಜೆಎಸ್‌ಎಸ್‌ಸಿ-ಸಿಜಿಎಲ್ ಪರೀಕ್ಷೆ ರದ್ದುಗೊಳಿಸಿದ್ದನ್ನು ಖಂಡಿಸಿ ಸುಮಾರು 2 ಸಾವಿರ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದ ವಿದ್ಯಾರ್ಥಿಗಳು ಎಕ್ಸಾಂ ರದ್ದುಪಡಿಸಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಭವಿಷ್ಯದ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇನ್ನು, ಪರೀಕ್ಷೆ ರದ್ದುಗೊಳಿಸಿದ್ದರಿಂದ ಮರುಪರೀಕ್ಷೆ ಸೇರಿದಂತೆ ಸೂಕ್ತ ಪರಿಹಾರ ನೀಡಬೇಕು ಎಂಬುದು ಅಭ್ಯರ್ಥಿಗಳ ಪ್ರಮುಖ ಒತ್ತಾಯ. ಇದೇ ವೇಳೆ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯಾಂಶ ಹೊರತರಲು ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಹೋರಾಟ ಹಿಂಪಡೆಯಲು ಮನವಿ
ಇದರಿಂದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದವರಿಗೆ ಅನ್ಯಾಯವಾಗಿದೆ ಎಂದು ಅಭ್ಯರ್ಥಿಗಳು ಹೋರಾಟ ನಡೆಸಿದ್ದರು. ಇತ್ತ ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿ ಹೋರಾಟ ಹಿಂಪಡೆಯುವಂತೆ ಮನವಿ ಮಾಡಲಾಗಿದೆ. ಆದರೆ ಜೆಪಿಎಸ್‌ಸಿ-ಜೆಎಸ್‌ಎಸ್‌ಸಿಸುಧಾರಣಾ ವೇದಿಕೆನಾಯಕರು ಸಿಬಿಐ ತನಿಖೆ ನಡೆಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ.
ಕಾನೂನು ಹೋರಾಟಕ್ಕೆ ಅವಕಾಶವಿದೆ
ಈ ನಡುವೆ, ಪರೀಕ್ಷೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಅಗತ್ಯವಿದ್ದರೆ ಕಾನೂನು ಹೋರಾಟದ ಮೂಲಕ ಪರಿಹಾರ ಪಡೆಯಬಹುದು ಎಂದು ಜಾರ್ಖಂಡ್‌ನ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವರು ಹೇಳಿದ್ದಾರೆ. ಪರೀಕ್ಷೆ ರದ್ದತಿ ವಿವಾದಕ್ಕೆ ಸರ್ಕಾರ ಯಾವ ರೀತಿಯ ಪರಿಹಾರ ಸಿಗಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ,