8 ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ಅಧ್ಯಾಯ, ಸುಪ್ರೀಂ ಕೋರ್ಟ್
- 8 ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ಅಧ್ಯಾಯ,
- ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಮೇಲೆ ಸಿಜೆಐ ಗರಂ
- ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸುವುದಾಗಿ ಎಚ್ಚರಿಕೆ
ನವದೆಹಲಿ: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ಅಧ್ಯಾಯವನ್ನು ಸೇರಿಸಿದ್ದಕ್ಕೆ ಬುಧವಾರ (ಫೆ.25) ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಸುಮೊಟೊ ಪ್ರಕರಣವನ್ನು ದಾಖಲಿಸಿಕೊಂಡು, ಸ್ವಯಂ ಪ್ರೇರಿತ ವಿಚಾರಣೆ ನಡೆಸಲಾಗುವುದು ಎಂದು ಸಿಜೆಐ ಸೂರ್ಯಕಾಂತ್ ಎಚ್ಚರಿಕೆ ನೀಡಿದ್ದಾರೆ.
ಈ ಬೆಳೆವಳಿಗೆಯು ವಕೀಲ, ನ್ಯಾಯಾಧೀಶ ಅಷ್ಟೇ ಅಲ್ಲದೇ ಸಂಪೂರ್ಣ ನ್ಯಾಯಿಕ ಸಮುದಾಯವನ್ನು ದೂಷಪೂರಿತ ಎಂಬಂತೆ ಬಿಂಬಿಸಲಾಗಿದೆ. ನ್ಯಾಯಾಂಗ ಮತ್ತು ನ್ಯಾಯಾಂಗ ಸಂಸ್ಥೆಗಳನ್ನು ದೂಷಿಸಲು ಯಾರಿಗೂ ಅವಕಾಶ ನೀಡುವುದಿಲ್ಲ, ಇದಕ್ಕೆ ಹೊಣೆಯಾದವರ ಮೇಲೆ ನ್ಯಾಯಪೀಠವು ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.
ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಇದು ಸಂವಿಧಾನದ ಮೂಲ ರಚನೆ ಮೇಲೆ ನಡೆಸಿದ ದಾಳಿ ಎಂದು ಕಿಡಿಕಾರಿದರು. ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ ಎಂಬ ಅಧ್ಯಾಯದ ಭಾಗವಾಗಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ವಿಷಯವನ್ನು ಪುಸ್ತಕ ಒಳಗೊಂಡಿದೆ ಎಂದು ಆಂಗ್ಲ ದಿನಪತ್ರಿಕೆಯೊಂದು ಸುದ್ದಿ ಪ್ರಕಟಿಸಿತ್ತು.
ನ್ಯಾಯಾಂಗ ವ್ಯವಸ್ಥೆ ಎದುರಿಸುತ್ತಿರುವ ಸವಾಲುಗಳಲ್ಲಿ ನ್ಯಾಯಾಂಗದ ವಿವಿಧ ಹಂತಗಳಲ್ಲಿನ ಭ್ರಷ್ಟಾಚಾರ ಮತ್ತು ಸಾಕಷ್ಟು ಸಂಖ್ಯೆಯ ನ್ಯಾಯಾಧೀಶರ ಕೊರತೆ, ಸಂಕೀರ್ಣ ಕಾನೂನು ಕಾರ್ಯವಿಧಾನಗಳು ಮತ್ತು ಕಳಪೆ ಮೂಲಸೌಕರ್ಯದಂತಹ ಅನೇಕ ಕಾರಣಗಳಿಂದಾಗಿ ಪ್ರಕರಣಗಳು ಭಾರೀ ಸಂಖ್ಯೆಯಲ್ಲಿ ಬಾಕಿ ಉಳಿದಿವೆ ಎಂದು ಅಧ್ಯಾಯದಲ್ಲಿ ಹೇಳಲಾಗಿತ್ತು.
ಈ ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದ ಹಿರಿಯ ವಕೀಲ ಕಪಿಲ್ ಸಿಬಲ್ 8ನೇ ತರಗತಿಯ ವಿದ್ಯಾರ್ಥಿಗಳಿಗೆ ನ್ಯಾಯಾಂಗದ ಭ್ರಷ್ಟಾಚಾರ ಬೋಧಿಸುವುದು ಗಂಭೀರ ಕಳವಳಕಾರಿ ಸಂಗತಿ ಎಂದು ವಾದ ಮಂಡಿಸಿದರು.
ಮತ್ತೊಬ್ಬ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ, ಸಮಾಜದ ಬಹುತೇಕ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರಯಿದೆ. ಆದರೆ ಇಲ್ಲಿ ಕೇವಲ ನ್ಯಾಯಾಂಗದಲ್ಲಿನ ಭ್ರಷ್ಟಾಚಾರವನ್ನಷ್ಟೇ ಟೀಕಿಸಲಾಗಿದೆ ಇದು, ವ್ಯವಸ್ಥೆ ಮೇಲೆ ಮಾಡುತ್ತಿರುವ ಆಘಾತಕಾರಿ ಬೆಳವಳಿಗೆ ಎಂದು ಬಿಂಬಿಸಲಾಗಿದೆ ಎಂದು ಆಕ್ಷೇಪಿಸಿದರು.
ಈ ಕುರಿತಂತೆ ತೀವ್ರ ಪ್ರತಿಕ್ರಿಯೆಯನ್ನು ನೀಡಿರುವ ಸಿಜೆಐ ಸೂರ್ಯಕಾಂತ್, ಮುಂದಿನ ದಿನದಲ್ಲಿ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ,(ಏಜನ್ಸೀಸ್).