ನ್ಯಾಯಾಧೀಶೆ ಸ್ವರ್ಣಕಾಂತ ಶರ್ಮಾ ಮತ್ತು ಅರವಿಂದ್ ಕೇಜ್ರಿವಾಲ್ 
ದೇಶ

ಅಬಕಾರಿ ಹಗರಣ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ ಸ್ವರ್ಣಕಾಂತ ಶರ್ಮಾ | Justice Swarna Kant Sharma

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸೇರಿ 21 ಜನರನ್ನೊಳಗೊಂಡ ಅಬಕಾರಿ ನೀತಿ ಹಗರಣ ಪ್ರಕರಣದ ವಿಚಾರಣೆಯಿಂದ ದೆಹಲಿ ಹೈಕೋರ್ಟ್ ನ್ಯಾಯಾಧೀಶೆ ಸ್ವರ್ಣಕಾಂತ ಶರ್ಮಾ(Justice Swarna Kant Sharma) ಗುರುವಾರ(ಮೇ 14) ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ.
ನ್ಯಾಯಾಧೀಶರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಕೇಜ್ರಿವಾಲ್ ಮತ್ತು ಪಕ್ಷದ ನಾಲ್ವರು ನಾಯಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಆರಂಭಿಸಿದ ಬಳಿಕ ನ್ಯಾಯಾಧೀಶರು ಮುಖ್ಯ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
ಅಬಕಾರಿ ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಮುಖ್ಯ ನ್ಯಾಯಾಧೀಶರನ್ನು ಕೋರಿರುವುದಾಗಿ ಅವರು ಹೇಳಿರುವ ಅವರು, ಪ್ರಕರಣದಿಂದ ಹಿಂದೆ ಸರಿದಿದ್ದಕ್ಕೆ ವಿವರಣೆ ನೀಡುತ್ತಾ, ಪ್ರಕರಣದಲ್ಲಿ ಪಕ್ಷಪಾತದ ಬಗ್ಗೆ ಯಾವುದೇ ಸಂದೇಹ ಬಾರದಂತೆ ನೋಡಿಕೊಳ್ಳಲು ಅಬಕಾರಿ ಪ್ರಕರಣದಿಂದ ಹಿಂದೆ ಸರಿಯುತ್ತಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ.
ಇನ್ನೂ ನ್ಯಾಯಾಧೀಶರ ಈ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಅರವಿಂದ್ ಕೇಜ್ರಿವಾಲ್, ಸತ್ಯವು ಜಯಗಳಿಸಿದೆ ಎಂದು ಹೇಳಿದ್ದು, ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಶರ್ಮಾ ಅವರ ನಿರ್ಧಾರವನ್ನು ಸತ್ಯಾಗ್ರಹದ ವಿಜಯ ಎಂದು ಬಣ್ಣಿಸಿದ್ದಾರೆ (ಏಜೆನ್ಸೀಸ್).