ಕಾಂಗ್ರೆಸ್ ಪ್ರತಿಭಟನೆ 
ದೇಶ

ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್​: ಪೊಲೀಸ್ ಕ್ರಮ ಖಂಡಿಸಿ ಪ್ರಧಾನಿ ನಿವಾಸದ ಹೊರಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ | Rahul Gandhi

ನವದೆಹಲಿ: ನೀಟ್ ಪರೀಕ್ಷೆ ಅಕ್ರಮಕ್ಕೆ ಹೊಣೆ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ಚಲೋ ಸಂಸತ್ ಯಾತ್ರೆ ನಡೆಸಿದ್ದ ಸಿಜೆಪಿ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ನಿವಾಸದ ಮುಂದೆ ರಾಹುಲ್ ಗಾಂಧಿ(Rahul Gandhi) ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯಲ್ಲಿ ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ರಾಜಾ ವಾರಿಂಗ್, ದೀಪೇಂದರ್ ಹೂಡಾ, ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಭಾಗವಹಿಸಿದ್ದು, ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದ್ದಾತೆ.
ಎಕ್ಸ್​ನಲ್ಲಿ ಈ ಕುರಿತು ಪೋಸ್ಟ್ ಹಾಕಿರುವ ರಾಹುಲ್ ಗಾಂಧಿ, ನಿನ್ನೆ ಯುವ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಅವರಿಂದ ಉತ್ತರಗಳನ್ನು ಕೋರಿ ನಾವು ಪ್ರಧಾನಿ ಮೋದಿಯವರ ಮನೆಗೆ ಮೆರವಣಿಗೆ ನಡೆಸಿದ್ದೇವೆ. ಸರ್ಕಾರ ಯಾವುದೇ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಬಯಸುವುದಿಲ್ಲ. ಸಂಸತ್ತಿನಲ್ಲಿ ಅದರ ಬಗ್ಗೆ ಚರ್ಚೆ ನಡೆಸಲು ಬಯಸುವುದಿಲ್ಲ. ಭಾರತದ ಯುವಕರ ಭವಿಷ್ಯವನ್ನು ನಾಶಪಡಿಸಿದ್ದಕ್ಕಾಗಿ ಪ್ರಧಾನಿ ಮತ್ತು ಗೃಹ ಸಚಿವ ರಾಜೀನಾಮೆ ನೀಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರತಿಭಟನಾ ಸ್ಥಳದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದು, ಕೇಂದ್ರ ಸರ್ಕಾರವನ್ನು ಸರ್ವಾಧಿಕಾರಿ ಸರ್ಕಾರ ಎಂದು ಕರೆದಿದ್ದು, ವಿದ್ಯಾರ್ಥಿಗಳ ವಿರುದ್ಧದ ಲಾಠಿಚಾರ್ಜ್ ಮತ್ತು ಬಲಪ್ರಯೋಗಕ್ಕೆ ಅದು ಉತ್ತರಿಸಬೇಕಾಗುತ್ತದೆ. ಯುವಜನರ ಮೇಲಿನ ದೌರ್ಜನ್ಯಕ್ಕೆ ಹೊಣೆ ಹೊತ್ತು ದಮನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ (ಏಜೆನ್ಸೀಸ್).