ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ವಿರೋಧಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ  
ದೇಶ

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್, ಪೆಲೆಟ್ ಗನ್ ಬಳಕೆ: ಸಂಸತ್ ಆವರಣದಲ್ಲಿ ಅಮಿತ್ ಶಾ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ | Opposition protests against Amit Shah

ನವದೆಹಲಿ: ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಲಾಟಿ ಚಾರ್ಜ್​, ಪೆಲೆಟ್ ಗನ್ ಬಳಕೆ ಹಾಗೂ ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಆರೋಪಕ್ಕೆ ಸಂಬಂಧಿಸದಂತೆ ಲೋಕಸಭೆಯಲ್ಲಿ ಅಮಿತ್ ಶಾ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆ ಬುಧವಾರವೂ(ಆ. 05) ಮುಂದುವರೆದಿದ್ದು, ಸಂಸತ್ ಆವರಣದಲ್ಲಿ ಅಮಿತ್ ಶಾ ಜವಾಬ್ ದೋ ಪ್ರತಿಭಟನೆ ನಡೆಸಿದ್ದಾರೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪ್ರತಿಪಕ್ಷಗಳ ಸಂಸದರು, ಪ್ರೇರಣಾ ಸ್ಥಳದಲ್ಲಿರುವ ಗಾಂಧಿ ಪ್ರತಿಮೆಯಿಂದ ಮಕರ ದ್ವಾರವರೆಗೆ ಮೆರವಣಿಗೆ ನಡೆಸಿ ಪ್ರಧಾನಿ ಮೋದಿ ಮತ್ತು ಶಾ ವಿರುದ್ಧ ಘೋಷಣೆ ಕೂಗಿ ಸ್ಪಷ್ಟನೆ ನೀಡುವಂತೆ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಲಿ;ಪ್ರಿಯಾಂಕಾ ಗಾಂಧಿ

ಈ ವೇಳೆ ಮಾತನಾಡಿರುವ ಸಂಸದೆ ಪ್ರಿಯಾಂಕಾ ಗಾಂಧಿ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಲಾಠಿ ಚಾರ್ಜ್, ಪೆಲೆಟ್ ಗನ್ ಬಳಕೆ ಹಾಗೂ ಅಶ್ರುವಾಯು ಸಿಡಿಸಿರುವ ಘಟನೆಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು.

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಲಾಠಿ ಚಾರ್ಜ್

ಈ ವೇಳೆ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾ, ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಲಾಠಿ ಚಾರ್ಜ್, ಪೆಲೆಟ್ ಗನ್ ಬಳಕೆ ಹಾಗೂ ಅಶ್ರುವಾಯು ಸಿಡಿಸಿರುವ ಘಟನೆಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ಭಾರತ ಪ್ರಜಾಪ್ರಭುತ್ವ ದೇಶ, ಇದು ಯಾರೊಬ್ಬರ ರಾಜ ದರ್ಬಾರಲ್ಲ. ಲಾಠಿ ಚಾರ್ಜ್, ಪೆಲೆಟ್ ಗನ್, ಟಿಯರ್​ ಗ್ಯಾಸ್​ ಬಳಸಲು ಆದೇಶ ಕೊಟ್ಟವರು ಯಾರು? ಸಾಂವಿಧಾನಿಕ ಹುದ್ದೆಯಲ್ಲಿರುವವರು ತಮ್ಮ ನಿರ್ಧಾರಗಳಿಗೆ ಹೊಣೆ ಹೊತ್ತುಳ್ಳಬೇಕು ಎಂದು ಆಗ್ರಹಿಸಿದ್ದಾರೆ (ಏಜೆನ್ಸೀಸ್).