ನವದೆಹಲಿ: ನಾಳೆ ನವದೆಹಲಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರ ಆತ್ಮಕಥೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ತಮಿಳುನಾಡು ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಭಾಗವಹಿಸುವ ಸಾಧ್ಯತೆಯಿದೆ ಎಂದು ಭಾನುವಾರ(ನ. 15) ವರದಿಯಾಗಿದೆ.
ಸೋನಿಯಾ ಗಾಂಧಿಯವರ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' ನ ಔಪಚಾರಿಕ ಬಿಡುಗಡೆ ಸಮಾರಂಭದಲ್ಲಿ ತಮಿಳುನಾಡು ಸಿಎಂ ವಿಜಯ್ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಕರ್ನಾಟಕದೊಂದಿಗಿನ ಮೇಕೆದಾಟು ಸಮಸ್ಯೆಯ ಹಿನ್ನೆಲೆಯಲ್ಲಿ ಸಿಎಂ ವಿಜಯ್ ನಾಳೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಭೇಟಿ ಮಾಡುವ ನಿರೀಕ್ಷೆಯಿದೆ. ಇನ್ನೂ ಕಳೆದ ಜೂನ್ನಲ್ಲಿ, ದೆಹಲಿಗೆ ಭೇಟಿ ನೀಡಿ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದ ಸಿಎಂ ವಿಜಯ್, ಬಳಿಕ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು.
ಇನ್ನೂ ಕರ್ನಾಟಕದ ಮೇಕೆದಾಟು ಅಣೆಕಟ್ಟು ಪ್ರಸ್ತಾವನೆಯನ್ನು ವಿರೋಧಿಸಲು ತಮಿಳುನಾಡು ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಬಳಿ ನಿಯೋಗವನ್ನು ಕರೆದೊಯ್ಯಬೇಕು. ಅದಕ್ಕೂ ಮೊದಲು ಚೆನ್ನೈನಲ್ಲಿ ಸರ್ವಪಕ್ಷ ಸಭೆ ನಡೆಸಬೇಕು ಎಂದು ವಿರೋಧ ಪಕ್ಷ ಡಿಎಂಕೆ ಒತ್ತಾಯಿಸಿದೆ (ಏಜೆನ್ಸೀಸ್).