ಉತ್ತರಾಖಂಡ: ಇಲ್ಲಿನ ನೈನಿತಾಲ್ ಪ್ರದೇಶದ ಹೋಟೆಲ್ವೊಂದರಲ್ಲಿ ಮಂಗಳವಾರ ಸಂಜೆ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಹಲವರು ಕಟ್ಟದದ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳವರು ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ಹೋಟೆಲ್ಗೆ ಮಾತ್ರವಲ್ಲದೇ, ಪಕ್ಕದ ಅಂಗಡಿ ಮತ್ತು ವಾಹನಗಳಿಗೂ ಕೂಡ ಬೆಂಕಿ ಹರಡಿದೆ ಎಂದು ವರದಿ ಉಲ್ಲೇಖಿಸಿದೆ.
"ಇಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ನಮಗೆ ತಿಳಿಸಲಾಯಿತು. ಕೆಲವು ಜನರು ಒಳಗೆ ಸಿಲುಕಿಕೊಂಡಿರುವುದನ್ನು ನಾವು ನೋಡಿದ್ದೇವೆ ಮತ್ತು ಅವರನ್ನು ರಕ್ಷಿಸಲಾಗುತ್ತಿದೆ. ಬೆಂಕಿ ವ್ಯಾಪಕವಾಗಿ ಹರಡಿದೆ. ಅದನ್ನು ನಿಯಂತ್ರಿಸುವುದು ಕಷ್ಟಕರವಾಗುತ್ತಿದೆ" ಎಂದು ಘಟನೆಯ ಪ್ರತ್ಯಕ್ಷದರ್ಶಿ ಗೌರವ್ ಜೋಶಿ ಸುದ್ದಿಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ,(ಏಜೆನ್ಸೀಸ್).