PBKS vs RR: ಚಂಡೀಗಢದ ಮುಲ್ಲಾಪುರದಲ್ಲಿರುವ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್ಆರ್ ವಿರುದ್ಧದ ಪಂದ್ಯದಲ್ಲಿ ಮಾರ್ಕಸ್ ಸ್ಟೊಯಿನಿಸ್, ಪ್ರಭ್ಸಿಮ್ರಾನ್ ಭರ್ಜರಿ ಬ್ಯಾಟಿಂಗ್ನಿಂದ ಪಂಜಾಬ್ ಕಿಂಗ್ಸ್ 20 ಓವರ್ಗಳಲ್ಲಿ 223ರನ್ಗಳ ಬೃಹತ್ ಮೊತ್ತದ ಗುರಿ ನೀಡಿದೆ.
ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಜಸ್ತಾನ್ ರಾಯಲ್ಸ್ ತಂಡದ ಬೌಲರ್ಗಳನ್ನು ಪಂಜಾಬ್ ಬ್ಯಾಟರ್ಗಳು ತತ್ತರಿಸುವಂತೆ ಮಾಡಿದ್ದಾರೆ. ಆರಂಭಿಕವಾಗಿ ಬ್ಯಾಟಿಂಗ್ ಮಾಡಿದ ಪ್ರಭ್ಸಿಮ್ರಾನ್ ಸಿಂಗ್, ಪ್ರಿಯಾಂಶ್ ಆರ್ಯ ಮತ್ತು ಶ್ರೇಯಸ್ ಅಯ್ಯರ್ ಅವರೊಂದಿಗೆ ಅದ್ಭುತವಾಗಿ ಆಟವಾಡಿ 59 ರನ್ಗಳಿಸಿದರು.
ನಂತರ ಕೊನೆಯವ ಓವರ್ನಲ್ಲಿ ಮಾರ್ಕಸ್ ಸ್ಟೊಯಿನಿಸ್ 24 ರನ್ಗಳಿಸಿ ಕೇವಲ 22 ಎಸೆತಗಳಲ್ಲಿ 62 ರನ್ ಗಳಿಸಿ ತಂಡವು 222 ರನ್ಗ ಬೃಹತ್ ಮೊತ್ತ ಕಲೆ ಹಾಕುವಲ್ಲಿ ಸಹಾಯ ಮಾಡಿದರು.