ಸಾಂದರ್ಭಿಕ ಚಿತ್ರ 
ದೇಶ

ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮೆಡಿಕಲ್ ಎಮರ್ಜೆನ್ಸಿ: ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ | Air India

ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮೆಡಿಕಲ್ ಎಮರ್ಜೆನ್ಸಿ ಎದುರಾಗಿದ್ದು, ತಕ್ಷಣ ಪೈಲಟ್ ವಿಮಾನವನ್ನು ಜೈಪುರದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ ಎಂದು ಸೋಮವಾರ(ಜ. 12) ವರದಿಯಾಗಿದೆ.
ಇಂದು ಬೆಳಗ್ಗೆ ಏರ್ ಇಂಡಿಯಾ ವಿಮಾನ AI-2571 ದೆಹಲಿಯಿಂದ ವಿಜಯವಾಡಕ್ಕೆ ಹೊರಟಿತು. ಆದಾಗ್ಯೂ, ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಅಸ್ವಸ್ಥರಾಗಿದ್ದು, ತಕ್ಷಣ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳ ಅನುಮತಿ ಪಡೆದ ಬಳಿಕ ವಿಮಾನವನ್ನು ಜೈಪುರಕ್ಕೆ ತಿರುಗಿಸಿದ್ದು, ಬೆಳಿಗ್ಗೆ 6:45 ಕ್ಕೆ ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ಬಳಿಕ ಅಸ್ವಸ್ಥಗೊಂಡ ಪ್ರಯಾಣಿಕನನ್ನು ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ವಿಮಾನವು ವಿಜಯವಾಡಕ್ಕೆ ಪ್ರಯಾಣಿಸಿದೆ ಎನ್ನಲಾಗಿದೆ (ಏಜೆನ್ಸೀಸ್).