ಕಾಂಗ್ರೆಸ್​ ಅಭ್ಯರ್ಥಿ ಮೀನಾಕ್ಷಿ ನಟರಾಜನ್  
ದೇಶ

ಮೀನಾಕ್ಷಿ ನಟರಾಜನ್​ಗೆ ಬಿಗ್ ಶಾಕ್​! ನಾಮಪತ್ರ ತಿರಸ್ಕೃತ ಬೆನ್ನಲ್ಲೇ ಬಿಜೆಪಿಗರ ಸಂಭ್ರಮ | Meenakshi Natarajan

ಪ್ರಮುಖ ಮುಖ್ಯಾಂಶಗಳು

  • ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ
  • ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ
  • ಬಿಜೆಪಿ ದೂರಿನ ಬೆನ್ನಲ್ಲೇ ರಾಜ್ಯಸಭಾ ಅಭ್ಯರ್ಥಿಯ ನಾಮಪತ್ರ ತಿರಸ್ಕಾರ
ಭೋಪಾಲ್​: ರಾಜ್ಯಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆ ನಾಮಪತ್ರ ಸಲ್ಲಿಸಲು ಹೋದ ಮೀನಾಕ್ಷಿ ನಟರಾಜನ್​ ಅವರ ನಾಮಪತ್ರವನ್ನು ಇದೀಗ ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದಾರೆ.
ಪಕ್ಷದ ಪರವಾಗಿ ಚುನಾವಣಾ ಅಖಾಡಕ್ಕಿಳಿದಿದ್ದ ಕಾಂಗ್ರೆಸ್​ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ ನಾಮಪತ್ರವನ್ನು ಚುನಾವಣಾ ಅಧಿಕಾರಿಗಳು ತಿರಸ್ಕರಿಸಿದ್ದಾರೆ. ಇದು ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ಗೆ ರಾಜಕೀಯವಾಗಿ ಮುಜುಗರದ ಪರಿಸ್ಥಿತಿಯನ್ನು ಸೃಷ್ಟಿಸಿದ್ದು, ನಾಮಪತ್ರ ತಿರಸ್ಕೃತ ಬೆನ್ನಲ್ಲೇ ಬಿಜೆಪಿಗರು ಸಂಭ್ರಮಿಸಿದ್ದಾರೆ.
ಅಸಲಿಗೆ ಮೀನಾಕ್ಷಿ ನಟರಾಜನ್ ಸಲ್ಲಿಸಿದ ನಾಮಪತ್ರಗಳ ಪರಿಶೀಲನೆಯ ಸಮಯದಲ್ಲಿ ಪ್ರಮುಖ ವಿಷಯಗಳು ಬೆಳಕಿಗೆ ಬಂದಿವೆ ಎನ್ನಲಾಗಿದೆ. ಚುನಾವಣಾ ಅಫಿಡವಿಟ್‌ನಲ್ಲಿ ತೆಲಂಗಾಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ವಿವರಗಳನ್ನು ಅವರು ಬಹಿರಂಗಪಡಿಸಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಈ ವಿಷಯದ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತು. ಬಿಜೆಪಿಯ ದೂರನ್ನು ಪರಿಶೀಲಿಸಿದ ಬಳಿಕ ಚುನಾವಣಾ ಅಧಿಕಾರಿಗಳು ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿದ್ದಾಗಿ ವರದಿಯಾಗಿದೆ.
ತಮ್ಮ ಕುರಿತಾಗಿ ಮೀನಾಕ್ಷಿ ನಾಮಪತ್ರದಲ್ಲಿ ಸಂಪೂರ್ಣ ಮಾಹಿತಿಯನ್ನು ಹಂಚಿಕೊಂಡಿಲ್ಲ ಎಂದು ಪರಿಗಣಿಸಲಾಗಿದೆ. ಚುನಾವಣಾ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಎಲ್ಲಾ ವಿವರಗಳನ್ನು ಅಫಿಡವಿಟ್‌ನಲ್ಲಿ ಬಹಿರಂಗಪಡಿಸಬೇಕು. ಆದರೆ, ಇದ್ಯಾವುದು ಅಲ್ಲಿ ಉಲ್ಲೇಖವಾಗದ ಹಿನ್ನೆಲೆ ತಿರಸ್ಕರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರಗೊಂಡಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಕಚೇರಿ ಮುಂಭಾಗದಲ್ಲೇ ಕಾಂಗ್ರೆಸ್ ನಾಯಕರು ಧರಣಿ ನಡೆಸಿದ್ದಾರೆ. ಪ್ರತಿಭಟನೆ ಕೈಗೊಳ್ಳುವ ಮೂಲಕ ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ,(ಏಜೆನ್ಸೀಸ್).