National Herald Case | ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ
ದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಆರೋಪಪಟ್ಟಿಯ ವಿಚಾರಣೆಯ ಮೇರೆಗೆ ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯವು ತನ್ನ ಆದೇಶವನ್ನು ಡಿಸೆಂಬರ್ 16 ಕ್ಕೆ ಮುಂದೂಡಿದೆ.
ಜಾರಿ ನಿರ್ದೇಶನಾಲಯು, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ದಿವಂಗತ ಮೋತಿಲಾಲ್ ವೋರಾ ಮತ್ತು ಯಂಗ್ ಇಂಡಿಯನ್ ಎಂಬ ಖಾಸಗಿ ಕಂಪನಿ ವಿರುದ್ಧ ಪಿತೂರಿ ಮತ್ತು ಹಣ ಅಕ್ರಮ ವರ್ಗಾವಣೆ ಆರೋಪ ಹೊರಿಸಿದೆ.
ಪ್ರಕರಣದ ಹಿನ್ನೆಲೆ ಮತ್ತು ED ಆರೋಪಗಳು
ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 2012 ರಲ್ಲಿ ನೀಡಿದ ದೂರಿನಿಂದ ಆರಂಭವಾದ ಈ ತನಿಖೆಯು, ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪ್ರಕಾಶಕರಾದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಆಸ್ತಿಗಳ ದುರುಪಯೋಗದ ಆರೋಪವನ್ನು ಗುರಿಯಾಗಿಸಿಕೊಂಡಿದೆ.
ಸೋನಿಯಾ ಮತ್ತು ರಾಹುಲ್ ಗಾಂಧಿ ತಲಾ 38 ಪ್ರತಿಶತ ಷೇರುಗಳನ್ನು ಹೊಂದಿರುವ ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮೂಲಕ ಕಾಂಗ್ರೆಸ್ ನಾಯಕರು ಪಕ್ಷದ ಸಾಲಗಳನ್ನು ಬಳಸಿಕೊಂಡು 50 ಲಕ್ಷ ರೂ.ಗೆ 2,000 ಕೋಟಿ ರೂ.ಗೂ ಹೆಚ್ಚು ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಂಚು ರೂಪಿಸಿದ್ದಾರೆ, ಇದರಲ್ಲಿ ನಕಲಿ ಬಾಡಿಗೆ ರಶೀದಿಗಳು ಮತ್ತು ನಕಲಿ ವಹಿವಾಟುಗಳು ಸೇರಿವೆ ಎನ್ನುವುದು ಇಡಿ ಆರೋಪ.
ಪ್ರಮುಖ ಆರೋಪಿಗಳು ಮತ್ತು ಕಾನೂನು ತಂಡ.......
ಪಿಎಂಎಲ್‌ಎ ಸೆಕ್ಷನ್ 44 ಮತ್ತು 45 ರ ಆರೋಪಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸ್ಯಾಮ್ ಪಿತ್ರೋಡಾ, ಸುಮನ್ ದುಬೆ, ದಿವಂಗತ ಮೋತಿಲಾಲ್ ವೋರಾ ಮತ್ತು ಆಸ್ಕರ್ ಫರ್ನಾಂಡಿಸ್, ಯಂಗ್ ಇಂಡಿಯನ್ ಮತ್ತು ಡೋಟೆಕ್ಸ್ ಮರ್ಚಂಡೈಸ್ ಪ್ರೈವೇಟ್ ಲಿಮಿಟೆಡ್ ಹೆಸರುಗಳಿದ್ದು, ಇವು ವಂಚನೆ (420) ಮತ್ತು ನಂಬಿಕೆ ದ್ರೋಹ (406) ದಂತಹ ಐಪಿಸಿ ಅಪರಾಧಗಳಿಗೆ ಸಂಬಂಧಿಸಿವೆ. ಇದಕ್ಕೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ (ಸೋನಿಯಾ), ಆರ್‌ಎಸ್ ಚೀಮಾ (ರಾಹುಲ್), ಪ್ರಮೋದ್ ದುಬೆ (ಡೋಟೆಕ್ಸ್), ಮತ್ತು ಇಡಿ ಪರವಾಗಿ ಎಎಸ್‌ಜಿ ಎಸ್‌ವಿ ರಾಜು ವಾದ ಮಂಡಿಸಿದ ವಕೀಲರುಗಳು(ಏಜೆನ್ಸೀಸ್).