Nitish Kumar | ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಸ್ಪರ್ಧೆ ಖಚಿತ!..ರಾಜ್ಯಸಭಾ ಅಖಾಡಕ್ಕಿಳಿಯುವ ಮುನ್ನ ನಿತೀಶ್​ ಕುಮಾರ್​​ ಎಮೋಷನಲ್ ಸಂದೇಶ! | Nitish Kumar

ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ನಿತೀಶ್​, ಎರಡು ದಶಕಗಳಿಗೂ ಹೆಚ್ಚು ಕಾಲ ರಾಜ್ಯಕ್ಕೆ ಸೇವೆ ಸಲ್ಲಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ರಾಜ್ಯದ ಜನರಿಗೆ ಧನ್ಯವಾದ ಅರ್ಪಿಸಿದರು.
ಎರಡು ದಶಕಗಳಿಗೂ ಹೆಚ್ಚು ಕಾಲ, ನೀವು ನಿರಂತರವಾಗಿ ನನ್ನ ಮೇಲೆ ನಿಮ್ಮ ನಂಬಿಕೆ ಮತ್ತು ಬೆಂಬಲವನ್ನು ಇರಿಸಿದ್ದೀರಿ. ಆ ನಂಬಿಕೆಯ ಬಲದ ಮೇಲೆ ನಾವು ಬಿಹಾರ ಮತ್ತು ನಿಮ್ಮೆಲ್ಲರಿಗೂ ಸಂಪೂರ್ಣ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಿದ್ದೇನೆ ಎಂದು ನಿತೀಶ್​ ಕುಮಾರ್​ ಬರೆದುಕೊಂಡಿದ್ದಾರೆ.
ಈ ಹಿಂದೆಯೂ ಸಹ ಅನೇಕ ಸಲ ನಿಮಗೆ ನನ್ನ ಕೃತಜ್ಞತೆ ಸಲ್ಲಿಸಿದ್ದೇನೆ, ನನ್ನ ಸಂಸದೀಯ ಪ್ರಯಾಣದ ಆರಂಭದಿಂದಲೂ, ಬಿಹಾರ ವಿಧಾನಸಭೆಯ ಎರಡೂ ಸದನಗಳ ಮತ್ತು ಸಂಸತ್ತಿನ ಎರಡೂ ಸದನಗಳ ಸದಸ್ಯನಾಗಬೇಕೆಂಬ ಬಯಕೆ ಮನಸ್ಸಲ್ಲಿ ಮನೆ ಮಾಡಿತ್ತು, ಅದಕ್ಕನುಗುಣವಾಗಿ ಈ ಬಾರಿಯ ರಾಜ್ಯಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.
ಮುಂದೆಯೂ ನಿಮ್ಮೊಂದಿಗಿನ ನನ್ನ ಸಂಬಂಧ ಮೊದಲಿನಂತೆ ಮುಂದುವರಿಯುತ್ತದೆ, ಬಿಹಾರ ಅಭಿವೃದ್ದಿಗಾಗಿ ನಿಮ್ಮೊಂದಿಗೆ ಒಟ್ಟಾಗಿ ಕೆಲಸ ಮಾಡುವ ನನ್ನ ಸಂಕಲ್ಪ ದೃಢವಾಗಿರುತ್ತದೆ ಮತ್ತು ರಚನೆಯಾಗಲಿರುವ ಹೊಸ ಸರ್ಕಾರಕ್ಕೆ ನನ್ನ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ಇರುತ್ತದೆ ಎಂದು ನಿತೀಶ್​ ಕುಮಾರ್​ ತಿಳಿಸಿದ್ದಾರೆ.

ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ

ನಿತೀಶ್ ಕುಮಾರ್ ಇಂದು ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಜರಿರುವ ನಿರೀಕ್ಷೆಯಿದೆ(ಏಜೆನ್ಸೀಸ್​).