ಕೇದರನಾತ್ ದೇವಸ್ಥಾನ, ಉತ್ತರಾಖಂಡ
- ನಾಳೆಯಿಂದ (ಏ.22) ರುದ್ರಪ್ರಯಾಗ್ ಜಿಲ್ಲೆಯಲ್ಲಿರುವ ಕೇದರನಾಥ್ ದೇವಸ್ಥಾನ ಓಪನ್
- ಭಕ್ತರ ದಂಡಿಗೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ
- ಯಾವುದೇ ಕಾರಣಕ್ಕೂ ದೇಗುಲದ ಒಳಗೆ ಮೊಬೈಲ್ ಫೋನ್ ಬಳಕೆಗೆ ಅನುಮತಿ ಇಲ್ಲ
ಉತ್ತರಾಖಂಡ: ನಾಳೆಯಿಂದ (ಏ.22) ರುದ್ರಪ್ರಯಾಗ್ ಜಿಲ್ಲೆಯಲ್ಲಿರುವ ಕೇದರನಾಥ್ ದೇವಸ್ಥಾನ ತೆರೆಯಲಿದ್ದು, ಬೆಳಗ್ಗೆ 8 ಗಂಟೆಯಿಂದಲೇ ಭಕ್ತರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ದೇಗುಲದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.
ಕೇದರನಾಥ್ ದೇವಾಸ್ಥನಕ್ಕೆ ಭೇಟಿ ನೀಡಲು ಭಕ್ತರ ಸಮೂಹ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಹಿನ್ನೆಲೆ ಅದಾಗಲೇ ಮಂಡಳಿ ಬಿಗಿ ಭದ್ರತೆಯಿಂದ ಹಿಡಿದು ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಇದರಲ್ಲಿ ಪ್ರಮುಖವಾದುದು ಎಂದರೆ ಅದು ಮೊಬೈಲ್ ಫೋನ್ಗಳ ಬಳಕೆ.
ದೇವಾಲಯದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಈಗ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸ್ಥಳದ ಪಾವಿತ್ರ್ಯತೆ ಮತ್ತು ಭಕ್ತರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದ ಆವರಣದೊಳಗೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದು, ಫೋಟೋ ಅಥವಾ ವಿಡಿಯೋಗಳನ್ನು ತೆಗೆಯುವುದು ಮತ್ತು ರೀಲ್‌ಗಳನ್ನು ರೆಕಾರ್ಡ್ ಮಾಡುವುದನ್ನು ನಿಷೇಧಿಸಲಾಗಿದೆ ಈ ಕ್ರಮ ಜರುಗಿಸಲಾಗಿದೆ.
ಈ ನಿಯಮಗಳನ್ನು ಉಲ್ಲಂಘಿಸುವ ಭಕ್ತರು ದಂಡದ ಜೊತೆಗೆ ಕಾನೂನು ಕ್ರಮ ಎದುರಿಸುಬೇಕಾಗುತ್ತದೆ ಎಂದು ದೇವಾಲಯ ಸಮಿತಿ ಸದಸ್ಯ ವಿನೀತ್ ಪೋಸ್ಟಿ ಎಚ್ಚರಿಕೆ ನೀಡಿದ್ದಾರೆ.