ಯಾರಿಂದಲೂ ಸಾಧ್ಯವಾಗಿಲ್ಲ... ಈ ಫೋಟೋದಲ್ಲಿರುವ ಹಮ್ಮಿಂಗ್ ಬರ್ಡ್ ಪತ್ತೆ ಹಚ್ಚಿದ್ರೆ ನೀವೇ ಜೀನಿಯಸ್! Optical Illusion Challenge ( Photo Source: Brightside.com )
- ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ
- ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ
- ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ
- ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್ಗಳು ತುಂಬಾ ಪ್ರಯೋಜನಕಾರಿ
Optical Illusion Challenge : ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೃಷ್ಟಿ ಭ್ರಮೆ ಎಂದರೇನು?
ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್ ಇಲ್ಯೂಶನ್) ಎಂದು ಕರೆಯುತ್ತೇವೆ.
ಮೋಜಿನ ಮಾರ್ಗ
ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….
ಸದ್ಯ ವೈರಲ್ ಆಗಿರುವ ಫೋಟೋದಲ್ಲಿ ಹೂವು, ಎಲೆಗಳು, ಹುಲ್ಲು ಮತ್ತು ಒಂದು ಬೆಕ್ಕು ಒಳಗೊಂಡ ಪೇಟಿಂಗ್ ಚಿತ್ರಣವನ್ನು ನೋಡಬಹುದು. ಇದೊಂದು ಅದ್ಭುತ ಪೇಟಿಂಗ್ ಆಗಿದೆ. ಅದೇ ಚಿತ್ರದ ಒಳಗೆ ಒಂದು ಹಮ್ಮಿಂಗ್ ಬರ್ಡ್ ಇದೆ. ಇದು ಜಗತ್ತಿನ ಅತ್ಯಂತ ಪುಟ್ಟ ಪಕ್ಷಿ. ಆ ಪಕ್ಷಿ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಅಷ್ಟು ಸುಲಭವಾಗಿ ನಮ್ಮ ಕಣ್ಣಿಗೆ ಕಾಣುವುದಿಲ್ಲ. ಹೀಗಾಗಿ ನೀವು ಕಣ್ಣಿಗೆ ಮಾತ್ರವಲ್ಲದೆ, ತಲೆಗೆ ಕೊಂಚ ಕೆಲಸ ಕೊಟ್ಟು ಸೂಕ್ಷ್ಮವಾಗಿ ಗಮನಿಸಿದರೆ ಹಮ್ಮಿಂಗ್ ಬರ್ಡ್ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬಹುದು. ನಿಮಗೆ 10 ಸೆಕೆಂಡ್ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಹಮ್ಮಿಂಗ್ ಬರ್ಡ್ ಎಲ್ಲಿದೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್ ಸಮಯದಲ್ಲಿ ನೀವು ಫೋಟೋದಲ್ಲಿ ಹಮ್ಮಿಂಗ್ ಬರ್ಡ್ ಎಲ್ಲಿದೆ ಎಂಬುದನ್ನು ಪತ್ತೆಹಚ್ಚಿದ್ದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್ ಮಾರ್ಕ್ಸ್ ಕೊಟ್ಟುಬಿಡಿ. ನಿಜಕ್ಕೂ ನೀವು ಜೀನಿಯಸ್. ಒಂದು ವೇಳೆ ಹಮ್ಮಿಂಗ್ ಬರ್ಡ್ ಪತ್ತೆಹಚ್ಚಲಾಗದೇ ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ, (ಏಜೆನ್ಸೀಸ್).