ನವದೆಹಲಿ: ದೇಶದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ವಿಶೇಷ ಪರಿಷ್ಕರಣೆ (SIR) ನೀತಿಯನ್ನು ಕೂಡಲೇ ಕೈಬಿಡುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು, ಕಾಕ್ರೋಚ್ ಜನತಾ ಪಾರ್ಟಿ (CJP) ದೆಹಲಿಯ ಜಂತರ್-ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ.
ಹೀಗಾಗಿ, ಇಂದು ರಾಷ್ಟ್ರ ರಾಜಧಾನಿ, ಸಂಪೂರ್ಣ ಸ್ತಬ್ದವಾಗಿದ್ದು, ಎಲ್ಲೆಡೆ ಕೇವಲ ಪ್ರತಿಭಟನಾಕಾರರು ಮಾತ್ರ ಕಾನಸಿಗುತ್ತಿದ್ದಾರೆ. ಆದರೆ ಪ್ರತಿಭಟನೆಗೆ ಮುಂಬೈನಿಂದ ಆಗಮಿಸುತ್ತಿದ್ದ, ಸಿಜೆಪಿ ಪಕ್ಷದ ಮುಖ್ಯಸ್ಥರಾದ ಅಭಿಜಿತ್ ದಿಪ್ಕೆ, ಆಶುತೋಷ್ ರಾಂಕಾ ಹಾಗೂ ಸೌರವ್ ದಾಸ್ ಸೇರಿದಂತೆ, ಸುಮಾರು 50 ಜನರನ್ನು ಪೊಲೀಸರು ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆದಿದ್ದಾರೆ.
ಈ ಸುದ್ದಿ ಹೊರ ಬೀಳುತ್ತಿದ್ದಂತೆ, ದೆಹಲಿಯ ಕನೋಟ್ಪ್ಲೇಸ್ನಲ್ಲಿ ಜಮಾವಣೆಗೊಂಡಿದ್ದ ಪ್ರತಿಭಟನಾಕಾರರ ತಾಳ್ಮೆಯ ಕಟ್ಟೆ ಒಡೆದಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಈ ಕಲ್ಲುತೂರಾಟದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದ್ದು, ಕಲ್ಲನ್ನು ತೂರಿದ ಸುಮಾರು 50 ಕ್ಕೂ ಅಧಿಕ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಇಂದು, ದೆಹಲಿ ಸುತ್ತಲೂ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಅಧಿಕವಾಗಿದ್ದು, ದೆಹಲಿ ಪೊಲೀಸ್ ಸೇರಿದಂರೆ, ಸುಮಾರು 20 ಸಾವಿರಕ್ಕೂ ಅಧಿಕ ಅರೆ ಮಿಲಿಟರಿ ಪಡೆಗಳನ್ನು ರಾಜಧಾನಿಯಲ್ಲಿ ನಿಯೋಜನೆ ಮಾಡಲಾಗಿದೆ. ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ಅಶ್ರುವಾಯು, ಜಲ ಫಿರಂಗಿ ಹಾಗೂ ಪೆಲೆಟ್ಗಳನ್ನು ಸಹ ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಜಮಾವಣೆ ಮಾಡುತ್ತಿದ್ದಾರೆಂದು ತಿಳಿದು ಬಂದಿದೆ.
ದೇಶದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ವಿಶೇಷ ಪರಿಷ್ಕರಣೆ (SIR) ನೀತಿಯನ್ನು ಕೂಡಲೇ ಕೈಬಿಡುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂಬ ಆಗ್ರಹವನ್ನು ಮುಂದಿಟ್ಟುಕೊಂಡು, ಕಾಕ್ರೋಚ್ ಜನತಾ ಪಾರ್ಟಿ (CJP) ದೆಹಲಿಯ ಜಂತರ್-ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದೆ.
ಆದರೆ, ಪ್ರತಿಭಟನೆಗೂ ಮುನ್ನವೇ, ಸಿಜೆಪಿ ಸ್ಥಾಪಕ ಅಭಿಜಿತ್ ದಿಪ್ಕೆ, ವಕ್ತಾರರಾದ, ಸೌರವ್ ದಾಸ್ ಹಾಗೂ ಆಶುತೋಷ್ ರಾಂಕಾ ಮತ್ತು ಯೂಟ್ಯೂಬರ್ ಧ್ರುವ್ ರಾಠಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಯಾಗಿದೆ, (ಏಜೆನ್ಸೀಸ್).