ಜಮ್ಮು ಮತ್ತು ಕಾಶ್ಮೀರ: ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನಲ್ಲಿ ಭಾನುವಾರ (ಮಾ. 15) ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಿ ಓರ್ವ ಭಯೋತ್ಪಾದಕ ಮೃತಪಟ್ಟಿದ್ದಾನೆ (Pakistani terrorist killed) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಂದು ಬೆಳಿಗ್ಗೆ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ ಸಮೀಪ ಸಂಶಯಾಸ್ಪದ ಚಲನವಲಯಗಳನ್ನು ಗಮನಿಸಿದ ನಂತರ ಸೇನೆಯು ಭಯೋತ್ಪಾದಕರು ಭೂಭಾಗಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಖಚಿತಪಡಿಸಿಕೊಂಡು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತಿ ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.
ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಪಡಿಸಿಕೊಂಡ ಭಾರತೀಯ ಸೇನೆ
ಕಾರ್ಯಾಚರಣೆಯ ಸಮಯದಲ್ಲಿ, ಸೈನಿಕರು ಒಂದು ಪೊದೆಯಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದರು. ಭದ್ರತಾ ಪಡೆಗಳು ತಮ್ಮ ಹೊಂಚುದಾಳಿಯ ಸ್ಥಾನವನ್ನು ಮರುಹೊಂದಿಸಿಕೊಂಡು ಶಂಕಿತರನ್ನು ಪ್ರಶ್ನಿಸಿದರು. ಈ ವೇಳೆ ಭಯೋತ್ಪಾದಕನು ಮನ ಬಂದಂತೆ ಗುಂಡು ಹಾರಿಸಿದನು. ನಂತರದ ಸಂಪರ್ಕದಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕನ್ನು ಕೊಲ್ಲಲಾಯಿತು ಎಂದು ಸೇನೆ ತಿಳಿಸಿತು.
ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಎಕೆ ರೈಫಲ್, ಪಿಸ್ತೂಲ್‌ಗಳು ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳು ಸೇರಿದಂತೆ ಯುದ್ಧೋಚಿತ ಅಂಗಡಿಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ. ಆದಾಗ್ಯೂ, ಬೇರೆ ಯಾವುದೇ ನುಸುಳುಕೋರರು ಇಲ್ಲ ಎಂದು ಖಚಿತಪಡಿಸಿಕೊಳ್ಳಲು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಸೇನಾ ಜೆಸಿಒ ಸಾವು
ಶನಿವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಸಮಯದಲ್ಲಿ ಜಾರಿಬಿದ್ದು ಜೂನಿಯರ್ ಕಮಿಷನ್ಡ್ ಅಧಿಕಾರಿ (ಜೆಸಿಒ) ಮೃತಪಟ್ಟಿದ್ದಾರೆ ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.
ಪೂಂಚ್ ಜಿಲ್ಲೆಯ ಅತ್ಯಂತ ಸವಾಲಿನ ಹಾಗೂ ಒರಟಾದ ಭೂಪ್ರದೇಶದಲ್ಲಿ (Rugged Terrain) ಭದ್ರತಾ ಪಡೆಗಳು ಕಾರ್ಯತಂತ್ರದ ಕಾರ್ಯಾಚರಣೆಯನ್ನು ನಡೆಸುತ್ತಿದ್ದವು. ಈ ತಂಡದ ನೇತೃತ್ವ ವಹಿಸಿದ್ದ ಸುಬೇದಾರ್ ಸಂದೀಪ್ ಕುಮಾರ್ ಕಾಲು ಜಾರಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿತಯಾಗದೇ ಸಾವನ್ನಪ್ಪಿದ್ದಾರೆ ಎಂದು ಸೇನೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ (ಏಜೆನ್ಸೀಸ್).