Red Fort | ಕೆಂಪುಕೋಟೆ  
ದೇಶ

ಪಾಕ್ ಉಗ್ರರಿಂದ ಭೀಕರ ದಾಳಿಗೆ ಸಂಚು..? ದೆಹಲಿಯ ಧಾರ್ಮಿಕ ಕೇಂದ್ರಗಳೇ ಟಾರ್ಗೆಟ್..ರಾಜಧಾನಿಯಲ್ಲಿ ಹೈ ಅಲರ್ಟ್ | Delhi Alert

DelhiAlert: ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರರು ದೆಹಲಿಯ ಜನದಟ್ಟಣೆಯ ಪ್ರದೇಶಗಳು ಮತ್ತು ಐತಿಹಾಸಿಕ ತಾಣಗಳನ್ನು ಗುರಿಯಾಗಿಸಿಕೊಂಡು ಸ್ಫೋಟ ನಡೆಸಲು ಯೋಜಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳು ನೀಡಿದ ಗಂಭೀರ ಎಚ್ಚರಿಕೆಯ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಣೆಯಾಗಿದೆ.
ನಗರದ ಕೆಂಪುಕೋಟೆ ಮತ್ತು ಚಾಂದಿನಿ ಚೌಕ್ ಪ್ರದೇಶದ ಪ್ರಸಿದ್ಧ ದೇವಾಲಯಗಳು ಉಗ್ರರ ಟಾರ್ಗೆಟ್ ಲಿಸ್ಟ್‌ನಲ್ಲಿವೆ ಎಂದು ವರದಿಯಾಗಿದೆ.
ಫೆಬ್ರವರಿ 6 ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯೊಂದರಲ್ಲಿ ನಡೆದ ಸ್ಫೋಟಕ್ಕೆ ಈ ಬೆದರಿಕೆ ಸಂಬಂಧಿಸಿದೆ ಎಂದು ವರದಿಯಾಗಿದ್ದು, ಇದರಲ್ಲೊ ಪ್ರತೀಕಾರವಾಗಿ ಭಾರತದಲ್ಲಿ ದೊಡ್ಡ ಮಟ್ಟದ ದಾಳಿ ನಡೆಸಲು ಲಷ್ಕರ್ ಸಂಘಟನೆ ಸಂಚು ರೂಪಿಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಫೆಬ್ರವರಿ 6 ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಈ ಬೆದರಿಕೆ ಸಂಬಂಧಿಸಿದೆ ಎಂದು ವರದಿಯಾಗಿದೆ, ಈ ಸ್ಫೋಟದಲ್ಲಿ 31 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಈ ಘಟನೆಗೆ ಪ್ರತಿಕಾರ ಭಾರತದಲ್ಲಿ ದೊಡ್ಡ ಮಟ್ಟದ ದಾಳಿ ನಡೆಸಲು ಲಷ್ಕರ್ ಸಂಘಟನೆ ಸಂಚು ರೂಪಿಸಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ರಾಷ್ಟ್ರ ರಾಜಧಾನಿಯಾದ್ಯಂತ ಪ್ರಮುಖ ಧಾರ್ಮಿಕ ಸ್ಥಳಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪ್ರಮುಖ ಧಾರ್ಮಿಕ ಸ್ಥಳಗಳು ಲಷ್ಕರ್-ಎ-ತೊಯ್ಬಾದ ಕಣ್ಣಿಗೆ ಬೀಳಬಹುದೆಂಬ ಭಯದ ನಡುವೆ, ಏಜೆನ್ಸಿಗಳು, ವಿಶೇಷವಾಗಿ ಪ್ರಮುಖ ದೇವಾಲಯಗಳು ಮತ್ತು ಜನದಟ್ಟಣೆಯ ಮಾರುಕಟ್ಟೆಗಳ ಸುತ್ತಲೂ ಹೆಚ್ಚಿನ ಕಣ್ಗಾವಲು ಕಾಯ್ದುಕೊಂಡಿವೆ.

ಕೆಂಪು ಕೋಟೆ ಬಳಿ ಸ್ಫೋಟ

ಕಳೆದ ವರ್ಷ ನವೆಂಬರ್​ನಲ್ಲಿ 10 ರಂದು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 12 ಜನರು ಸಾವನ್ನಪ್ಪಿ, ಸುಮಾರು 24 ಜನರು ಗಾಯಗೊಂಡ ಘಟನೆ ನಡೆದ ಮೂರು ತಿಂಗಳ ಬಳಿಕ ಈ ಬೆದರಿಕೆ ಬಂದಿದೆ(ಏಜೆನ್ಸೀಸ್​​).