Ajit Pawar 
ದೇಶ

ವಿಮಾನ ಅಪಘಾತದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸಾವು.. Ajit Pawar

ಮಹಾರಾಷ್ಟ್ರ: ( Ajit Pawar) ಎನ್‌ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಅವರು ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ.
ಜಿಲ್ಲಾ ಪರಿಷತ್ ಚುನಾವಣೆಯ ಪ್ರಚಾರ ಸಭೆಗಳು ಬಾರಾಮತಿಯಲ್ಲಿ ನಡೆಯುತ್ತಿವೆ. ಹೀಗಾಗಿ ಅಜಿತ್ ಪವಾರ್ ಬುಧವಾರ ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ವಿಮಾನವು ನಿಲ್ದಾಣದ ರನ್‌ವೇಯಲ್ಲಿ ಇಳಿಯುತ್ತಿದ್ದಾಗ, ಹಠಾತ್ ತಾಂತ್ರಿಕ ದೋಷ ಸಂಭವಿಸಿದೆ. ಪೈಲಟ್ ನಿಯಂತ್ರಣ ಕಳೆದುಕೊಂಡು ವಿಮಾನ ಅಪಘಾತಕ್ಕೀಡಾಯಿತು.
ಪ್ರಾಥಮಿಕ ವರದಿಗಳ ಪ್ರಕಾರ, ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ದೃಢಪಡಿಸಿವೆ.
ವಿಮಾನ ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಇದು ತಾಂತ್ರಿಕ ದೋಷವೋ ಅಥವಾ ಬೇರೆ ಯಾವುದಾದರೂ ಕಾರಣವೋ ಎಂದು ತನಿಖೆ ಮಾಡಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಉನ್ನತ ಮಟ್ಟದ ತನಿಖೆ ನಡೆಸುವ ಸಾಧ್ಯತೆಯಿದೆ.