Pahalgam Attack (ಚಿತ್ರ X) 
ದೇಶ

ಪಹಲ್ಗಾಮ್ ಕರಾಳ ಘಟನೆಗೆ ಒಂದು ವರ್ಷ...ಸಂತ್ರಸ್ತರನ್ನು ಸ್ಮರಿಸುತ್ತ ಉಗ್ರರಿಗೆ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ! Pahalgam Attack

ಪ್ರಮುಖ ಮುಖ್ಯಾಂಶಗಳು

  • ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿ
  • ದಾಳಿಯಲ್ಲಿ 26 ಅಮಾಯಕರು ಮೃತಪಟ್ಟಿದ್ದು, ಅವರ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಇಂದು (ಏ.22) ಸಂತಾಪ ಸೂಚಿಸಿದ್ದಾರೆ
  • ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಅಮಾಯಕರನ್ನು ನೆನೆಯುತ್ತಿದ್ದೇನೆ
  • ಈ ನೋವನ್ನು ಭರಿಸುತ್ತಿರುವ ಸಂತ್ರಸ್ತ ಕುಟುಂಬಗಳ ಪರವಾಗಿ ನನ್ನ ಪ್ರಾರ್ಥನೆಗಳು ಸದಾ ಇರುತ್ತವೆ
ನವದೆಹಲಿ: ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಮೃತಪಟ್ಟಿದ್ದು, ಅವರ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ಇಂದು (ಏ.22) ಸಂತಾಪ ಸೂಚಿಸಿದ್ದಾರೆ.
ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಹಂಚಿಕೊಂಡಿರುವ ಪ್ರಧಾನಿ ಮೋದಿ ಕಳೆದ ವರ್ಷ ಇದೇ ದಿನ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಅಮಾಯಕರನ್ನು ನೆನೆಯುತ್ತಿದ್ದೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ನೋವನ್ನು ಭರಿಸುತ್ತಿರುವ ಸಂತ್ರಸ್ತ ಕುಟುಂಬಗಳ ಪರವಾಗಿ ನನ್ನ ಪ್ರಾರ್ಥನೆಗಳು ಸದಾ ಇರುತ್ತವೆ.
ಒಂದು ರಾಷ್ಟ್ರವಾಗಿ, ನಾವು ಈ ದುಃಖದಲ್ಲಿ ಒಂದಾಗಿದ್ದೇವೆ ಮತ್ತು ಭಯೋತ್ಪಾದನೆಯನ್ನು ಎದುರಿಸಲು ದೃಢಸಂಕಲ್ಪ ಮಾಡಿದ್ದೇವೆ. ಭಾರತವು ಯಾವುದೇ ರೀತಿಯ ಭಯೋತ್ಪಾದನೆಗೆ ತಲೆಬಾಗುವುದಿಲ್ಲ ಮತ್ತು ಭಯೋತ್ಪಾದಕರ ಹೇಯ ಸಂಚುಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಕಳೆದ ವರ್ಷ ಏಪ್ರಿಲ್ 22 ರಂದು ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಪೊಂದು ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಸುಮಾರು 26 ಜನರನ್ನು ಹತ್ಯೆಗೈದರು. 
ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಇರುವ 9 ಪ್ರಮುಖ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಯಿತು. ಈ ದಾಳಿಯಲ್ಲಿ 80 ಭಯೋತ್ಪಾದಕರು ಹತರಾದರು. 

ಆಪರೇಷನ್​ ಸಿಂಧೂರ

ಆಪರೇಷನ್ ಸಿಂಧೂರ್ ಎಂಬುದು 2025ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಅತ್ಯಂತ ದೊಡ್ಡ ಮಟ್ಟದ ಪ್ರತೀಕಾರದ ಕಾರ್ಯಾಚರಣೆಯಾಗಿದೆ. ಆದಾಗ್ಯೂ, ಪಹಲ್ಗಾಮ್ ದಾಳಿಯಲ್ಲಿ ಅನೇಕ ಮಹಿಳೆಯರು ತಮ್ಮ ಗಂಡಂದಿರನ್ನು ಕಳೆದುಕೊಂಡು ವಿಧವೆಯರಾಗಿದ್ದರು. ಅವರಿಗೆ ನ್ಯಾಯ ಒದಗಿಸುವ ಮತ್ತು ಉಗ್ರರಿಗೆ ಎಚ್ಚರಿಕೆ ನೀಡುವ ಸಲುವಾಗಿ ಈ ಹೆಸರನ್ನು ಇಡಲಾಯಿತು (ಏಜೆನ್ಸೀಸ್​).