PM Modi's mementos |ಪ್ರಧಾನಿ ಮೋದಿ ಸ್ಮರಣಿಕೆಗಳ ಹರಾಜು 
ದೇಶ

ಇಂದು ಚೆನ್ನೈಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ: 13 ಸಾವಿರ ಕೋಟಿ ರೂ. ವೆಚ್ಚ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ | PM Modi

ಪ್ರಧಾನಿ ನರೇಂದ್ರ ಮೋದಿ ಇಂದು(ಅ. 11) ತಮಿಳುನಾಡಿನ ಚೆನ್ನೈಗೆ ಭೇಟಿ ನೀಡಲಿದ್ದು, 13,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು(ಅ. 11) ತಮಿಳುನಾಡಿನ ಚೆನ್ನೈಗೆ ಭೇಟಿ ನೀಡಲಿದ್ದು, 13,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ.

ಮೆಟ್ರೋ ರೈಲು, ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆಗಳು, ಬಂದರುಗಳು, ಪೆಟ್ರೋಲಿಯಂ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳು ಸೇರಿದಂತೆ ಇತರ ಕೆಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ಪ್ರಧಾನಿ ನೆರವೇರಿಸಲಿದ್ದಾರೆ ಎನ್ನಲಾಗಿದೆ.

ಚೆನ್ನೈ ಮೆಟ್ರೋ ರೈಲಿನ ಎರಡನೇ ಹಂತದ ಪೂಂದಮಲ್ಲಿ-ವಡಪಳನಿ ವಿಭಾಗವನ್ನು ಮೋದಿ ಉದ್ಘಾಟಿಸಲಿದ್ದಾರೆ. ಸುಮಾರು 4,900 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ವಿಭಾಗವು ನಗರದ ಪಶ್ಚಿಮ ಭಾಗಗಳಿಂದ ಇತರ ಪ್ರಮುಖ ಪ್ರದೇಶಗಳಿಗೆ ಪ್ರಯಾಣಿಸಲು ಅನುಕೂಲವಾಗಲಿದೆ.

ಬೆಳಗ್ಗೆ 11.30ರ ಸುಮಾರಿಗೆ ಪ್ರಧಾನಿ ಮೋದಿ ಪೋರೂರ್ ಬೈಪಾಸ್ ನಿಲ್ದಾಣದಿಂದ ಪೂಂದಮಲ್ಲಿ ಬೈಪಾಸ್ ನಿಲ್ದಾಣಕ್ಕೆ ಮೆಟ್ರೋದಲ್ಲಿ ಪ್ರಯಾಣಿಸಿ ಹಿಂತಿರುಗಲಿದ್ದಾರೆ. ಬಳಿಕ ಜಲಕಂಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಐಐಟಿ ಮದ್ರಾಸ್‌ನಲ್ಲಿರುವ ಸುಧಾ ಗೋಪಾಲಕೃಷ್ಣನ್ ಮೆದುಳು ಸಂಶೋಧನಾ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.

ಜೊತೆಗೆ ಸುಮಾರು ರೂ. 3,700 ಕೋಟಿ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಲಿದ್ದು, ಕೆಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ವೇಳೆ ಹಲವು ಕಾರ್ಯಕ್ರಮಗಳಲ್ಲಿ ಸಿಎಂ ವಿಜಯ್ ಭಾಗವಹಿಸುವ ಸಾಧ್ಯತೆಯಿದೆ. ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ (ಏಜೆನ್ಸೀಸ್).