ಪ್ರಧಾನಿ ನರೇಂದ್ರ ಮೋದಿ 
ದೇಶ

ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ಬೆಂಬಲಿಸುವಂತೆ ಉಭಯ ಸದನಗಳ ನಾಯಕರಿಗೆ ಪತ್ರ ಬರೆದ ಪ್ರಧಾನಿ ಮೋದಿ | PM Modi

ನವದೆಹಲಿ: ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೆ ತರುವ ಸಮಯ ಬಂದಿದೆ, 2029ರ ಲೋಕಸಭೆ & ವಿಧಾನಸಭೆ ಚುನಾವಣೆಗಳನ್ನು ಮಹಿಳಾ ಮೀಸಲಾತಿಯೊಂದಿಗೆ ನಡೆಸಬೇಕು,
ಈ ಹಿನ್ನೆಲೆ ಕಾಯ್ದೆಗೆ ಒಗ್ಗಟ್ಟಿನ ಬೆಂಬಲ ನೀಡುವಂತೆ ಕೋರಿ ಲೋಕಸಭೆ ಮತ್ತು ರಾಜ್ಯಸಭೆ ನಾಯಕರಿಗೆ ಪ್ರಧಾನಿ ಮೋದಿ(PM Modi) ಪತ್ರ ಬರೆದಿದ್ದಾರೆ.
ಏಪ್ರಿಲ್ 16ರಿಂದ 18ರವರೆಗೆ ನಡೆಯಲಿರುವ ವಿಶೇಷ ಅಧಿವೇಶನಕ್ಕೂ ಮುನ್ನ, ಸಂಸತ್ತಿನ ಉಭಯ ಸದನಗಳ ರಾಜಕೀಯ ಪಕ್ಷಗಳ ನಾಯಕರಿಗೆ ಶನಿವಾರ(ಏ.11) ಪ್ರಧಾನಿ ಮೋದಿ ಪತ್ರ ಬರೆದಿದ್ದು,  2023ರ ನಾರಿ ಶಕ್ತಿ ವಂದನ ಅಧಿನಿಯಂ ಎಂದು ಔಪಚಾರಿಕವಾಗಿ ಕರೆಯಲ್ಪಡುವ ಕಾಯ್ದೆಯನ್ನು ಬೆಂಬಲಿಸಲು ಸದಸ್ಯರು ಒಗ್ಗೂಡುವಂತೆ ಒತ್ತಾಯಿಸಿದ್ದಾರೆ.
ವಿಸ್ತೃತ ಚರ್ಚೆಗಳ ನಂತರ, ದೇಶಾದ್ಯಂತ ನಾರಿ ಶಕ್ತಿ ವಂದನ ಅಧಿನಿಯಮವನ್ನು ಅದರ ನಿಜವಾದ ಉತ್ಸಾಹದಲ್ಲಿ ಜಾರಿಗೆ ತರುವ ಸಮಯ ಬಂದಿದೆ ಎಂಬ ತೀರ್ಮಾನಕ್ಕೆ ನಾವು ಬಂದಿದ್ದೇವೆ. 2029ರ ಲೋಕಸಭಾ ಚುನಾವಣೆಗಳು ಮತ್ತು ವಿಧಾನಸಭಾ ಚುನಾವಣೆಗಳನ್ನು ಮಹಿಳಾ ಮೀಸಲಾತಿಯೊಂದಿಗೆ ನಡೆಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.
ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾಗಿ ಅನುಷ್ಠಾನ ಮತ್ತು 2027ರ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್ವಿಗಡಣೆ ಪ್ರಕ್ರಿಯೆಗೆ ಸಂಬಂಧಿಸಿದ ಕಾನೂನು ತಿದ್ದುಪಡಿಗಳನ್ನು ಮಾಡಲು ಕೇಂದ್ರ ಸರ್ಕಾರ ಏಪ್ರಿಲ್ 16ರಿಂದ 18ರವರೆಗೆ ವಿಶೇಷ ಸಂಸತ್ ಅಧಿವೇಶನವನ್ನು ಕರೆದಿದೆ. 
ಅಸ್ತಿತ್ವದಲ್ಲಿರುವ ನಿಬಂಧನೆಗಳ ಅಡಿಯಲ್ಲಿ ಮೀಸಲು ಪುನರ್ವಿಂಗಡಣೆಯ ನಂತರ ಜಾರಿಗೆ ಬರುವುದಿಲ್ಲ, ಇದು 2034ರವರೆಗೆ ಅದರ ಅನುಷ್ಠಾನವನ್ನು ವಿಳಂಬಗೊಳಿಸುವ ಸಾಧ್ಯತೆಯಿದೆ. ಹೀಗಾಗಿ ಪ್ರಸ್ತಾವಿತ ತಿದ್ದುಪಡಿಗಳನ್ನು 2029ರ ಲೋಕಸಭಾ ಚುನಾವಣೆಗೆ ಕೋಟಾವನ್ನು ಕಾರ್ಯಗತಗೊಳಿಸಲು ಅನುಕೂಲವಾಗುವಂತೆ ಜಾರಿಗೆ ತರಲಾಗುತ್ತಿದೆ ಎನ್ನಲಾಗದೆ. ಇನ್ನೂ ಕ್ಷೇತ್ರ ಪುನರ್ವಿಂಗಡಣೆ ಕಾಯ್ದೆಯೂ ಲೋಕಸಭೆ ಸ್ಥಾನಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸುತ್ತದೆ. ಅದರಲ್ಲಿ ಮಹಿಳಾ ಮೀಸಲಾತಿ ಕಾಯ್ದೆ ಮೂಲಕ 273 ಸ್ಥಾನಗಳನ್ನು ಮಹಿಳೆಯರಿಗೆ ಸಿಗಲಿವೆ (ಏಜೆನ್ಸೀಸ್).