ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರವಾದಿ ಸೋನಮ್ ವಾಂಗ್‌ಚುಕ್ ರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸಿದ ದೆಹಲಿ ಪೊಲೀಸ್
- ನೀಟ್ ಅಕ್ರಮ ವಿರೋಧಿಸಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರವಾದಿ ಸೋನಮ್ ವಾಂಗ್‌ಚುಕ್
- ಹೈಕೋರ್ಟ್ ಆದೇಶದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಸಚಿನ್ ಶರ್ಮಾ ಸ್ಪಷ್ಟನೆ
- ಅಭಿಜಿತ್ ದೀಪ್ಕೆ ಉಪವಾಸ ಸತ್ಯಾಗ್ರಹ ಆರಂಭ
ನವದೆಹಲಿ: ಕಳೆದ 21 ದಿನಗಳಿಂದ ನೀಟ್ ಸೇರಿದಂತೆ ದೇಶದಲ್ಲಿ ನಡೆಯುವ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮವನ್ನುವಿರೋಧಿಸಿ ಪರಿಸರವಾದಿ ಸೋನಮ್ ವಾಂಗ್‌ಚುಕ್ (Sonam Wangchuk) ದೆಹಲಿಯ ಜಂತರ್ ಮಂತರ್ನಲ್ಲಿ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದರು.
ಇಂದು (ಶನಿವಾರ, ಜು.18) ಬೆಳಿಗ್ಗೆ ದೆಹಲಿ ಪೊಲೀಸರು, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಸತ್ಯಾಗ್ರಹದಲ್ಲಿ ನಿರತರಾಗಿದ್ದ ವಾಂಗ್‌ಚುಕ್ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ಹೊತ್ತೊಯ್ದಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ಹೋಗಲು ಒಪ್ಪದ ವಾಂಗ್‌ಚುಕ್ ಅವರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಲವಂತವಾಗಿ ಎತ್ತುಕೊಂಡು ಹೋಗಿರುವ ದೃಶ್ಯಗಳು ಸೋಷಿಯಲ್ ಮೀಡಿಯಾನಲ್ಲಿ ವೈರಲ್ ಆಗುತ್ತಿವೆ.
ವೈಧ್ಯಕೀಯ ಪರೀಕ್ಷೆಗಾಗಿ ಸ್ಥಳಾಂತರ ಮಾಡಿದ್ದೇವೆ!
ಈ ಘಟನೆ ಬಗ್ಗೆ ದೇಶದೆಲ್ಲಡೆ ಚೆರ್ಚೆ ಆರಂಭವಾಗುತ್ತಿದ್ದಂತೆ ಇದಕ್ಕೆ ಸ್ಪಷ್ಟನೆ ನೀಡಿರುವ ನವದೆಹಲಿ ಡಿಸಿಪಿ ಸಚಿನ್ ಶರ್ಮಾ, ನಾವು ದೆಹಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಪಾಲಿಸುತ್ತಿದ್ದೆವೆ, ಉಪವಾಸದಿಂದ ವಾಂಗ್‌ಚುಕ್ ಅವರ ಆರೋಗ್ಯ ಹದಗೆಟ್ಟ ಕಾರಣ ಅವರಿಗೆ ವೈಧ್ಯಕೀಯ ಚಿಕಿತ್ಸೆಯನ್ನು ನೀಡುವ ಸಲುವಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
21 ದಿನಗಳಿಂದ ಉಪವಾಸ ಮಾಡುತ್ತಿರುವ ಸೋನಮ್ ವಾಂಗ್‌ಚುಕ್ ನಿರ್ಜಲೀಕರಣದಿಂದ ಬಳಲುತ್ತಿರುವ ಕಾರಣ ಅವರ ತೂಕ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಹೀಗಾಗಿ ಅವರಿಗೆ ತುರ್ತು ವೈಧ್ಯಕೀಯ ಸೇವೆ ನೀಡಬೇಕೆಂದು ನ್ಯಾಯಾಲಯ ಹೇಳಿತ್ತು, ಅದನ್ನು ಪಾಲಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಡಿಸಿಪಿ ಶರ್ಮಾ ಮಾಧ್ಯಮದವರಿಗೆ ತಿಳಿಸಿದ್ದಾರೆ.
ಉಪವಾಸಕ್ಕೆ ಕುಳಿತ ದೀಪ್ಕೆ!
ಸೋನಮ್ ವಾಂಗ್ಚುಕ್ರನ್ನು ಪೊಲೀಸರು ಕರೆದುಕೊಂಡು ಹೋಗುತ್ತಿದ್ದಂತೆ ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ಉದ್ವಗ್ನ ಪರಿಸ್ಥಿತಿ ಕಂಡುಬಂದಿತು. ನಂತರ ನೆರೆದಿದ್ದ ಪ್ರತಿಭಟನಾಕಾರರ ಎದುರಿಕೆ ಬಂದ ಕಾಕ್ರೋಚ್ ಜನತಾ ಪಾರ್ಟಿ ಸ್ಥಾಪಕ ಅಭಿಜಿತ್ ದೀಪ್ಕೆ, ನಾನು ಇಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಘೋಷಿಸಿತ್ತು, ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಸಹ ಮಾಡಿದ್ದಾರೆ, (ಏಜನ್ಸೀಸ್).