ಹೃದರಾಬಾದ್: ಖ್ಯಾತ ನಟಿ ಪೂರ್ಣಾ (Poorna) ಅವರು ಸದ್ಯದಲ್ಲೇ ಎರಡನೇ ಬಾರಿಗೆ ತಾಯಿಯಾಗಲಿದ್ದಾರೆ. ಈ ಸಂತಸದ ಸುದ್ದಿಯನ್ನು ಅವರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ಹಂಚಿಕೊಂಡಿದ್ದಾರೆ.
ಮೂರು ವರ್ಷಗಳ ಹಿಂದೆ ದುಬೈ ಮೂಲದ ಉದ್ಯಮಿ ಶಾನಿದ್ ಆಸಿಫ್ ಅಲಿ ಅವರನ್ನು ವಿವಾಹವಾಗಿದ್ದ ಪೂರ್ಣಾ ಅವರಿಗೆ ಈಗಾಗಲೇ ಒಬ್ಬ ಮಗನಿದ್ದಾನೆ. ಈಗ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಪೂರ್ಣಾ ಅವರು ತಮ್ಮ ಇತ್ತೀಚಿನ ಮೆಟರ್ನಿಟಿ ಫೋಟೋಶೂಟ್ ಚಿತ್ರಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಅವುಗಳಲ್ಲಿ ತಮ್ಮ ಬೇಬಿ ಬಂಪ್ (Baby Bump) ಪ್ರದರ್ಶಿಸಿದ್ದಾರೆ. ಈ ಸುಂದರ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಪೂರ್ಣಾ ಅವರ ಈ ಪೋಸ್ಟ್ ನೋಡಿ ಸಿನಿಮಾ ರಂಗದ ಗಣ್ಯರು, ಅಭಿಮಾನಿಗಳು ಮತ್ತು ನೆಟ್ಟಿಗರು ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ನಟಿ ಪೂರ್ಣಾ ಕೇವಲ ಸಿನಿಮಾಗಳಲ್ಲದೆ, ಕಿರುತೆರೆಯ ಜನಪ್ರಿಯ ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರ್ತಿಯಾಗಿ ಕೂಡ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ನಂದಮೂರಿ ಬಾಲಕೃಷ್ಣ ಅಭಿನಯದ 'ಅಖಂಡ 2' ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.