ದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕಾರ್ಯವನ್ನು ಅಸ್ಸಾಂ ಕಾಂಗ್ರೆಸ್ ಸ್ಕ್ರೀನಿಂಗ್ ಸಮಿತಿಯ ಅಧ್ಯಕ್ಷೆಯನ್ನಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ.
ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ಸ್ಕ್ರೀನಿಂಗ್ ಸಮಿತಿಗಳಿಗೆ ಎಐಸಿಸಿ ತನ್ನ ನಾಯಕರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದು, ಕೇರಳಕ್ಕೆ ಮಾಜಿ ರಾಜ್ಯಸಭಾ ಸದಸ್ಯ ಮಧುಸೂದನ್ ಮಿಸ್ತ್ರಿ, ತಮಿಳುನಾಡು ಮತ್ತು ಪುದುಚೇರಿಗೆ ಛತ್ತೀಸ್‌ಗಢದ ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದಿಯೋ ಮತ್ತು ಪಶ್ಚಿಮ ಬಂಗಾಳಕ್ಕೆ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ರನ್ನು ನೇಮಕ ಮಾಡಲಾಗಿದೆ.
ಈ ವರ್ಷ ನಾಲ್ಕು ರಾಜ್ಯಗಳು ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗ ಕೆಲವೇ ತಿಂಗಳುಗಳಲ್ಲಿ ದಿನಾಂಕ ಪ್ರಕಟಿಸುವ ನಿರೀಕ್ಷೆಯಿದ್ದು, ಅಸ್ಸಾಂ ಚುನಾವಣೆಯ ಬಗ್ಗೆ ಹೇಳುವುದಾದರೆ, ಪ್ರಸ್ತುತ ವಿಧಾನಸಭೆಯ ಅವಧಿ 2026 ರ ಮೇ 20 ರಂದು ಕೊನೆಗೊಳ್ಳುತ್ತದೆ.
ಎಲ್ಲಾ 126 ಸದಸ್ಯ ಬಲದ ವಿಧಾನಸಭೆಗೆ ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ ಚುನಾವಣೆಗಳನ್ನು ನಡೆಸುವ ನಿರೀಕ್ಷೆಯಿದೆ, ಈ ಹಿಂದಿನ ಚುನಾವಣೆಗಳಂತೆಯೇ ಬಹು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಸ್ಸಾಂ, ಈಶಾನ್ಯ ಭಾಗದಲ್ಲಿ ರಾಜಕೀಯವಾಗಿ ಮಹತ್ವದ ರಾಜ್ಯವಾಗಿ ಉಳಿದಿದ್ದು, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಚುನಾವಣೆಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತದೆ. ಸತತ ಮೂರನೇ ಅವಧಿಗೆ ಅಧಿಕಾರ ಹಿಡಿಯಲು ಬಿಜೆಪಿ ನೇತೃತ್ವದ ಎನ್‌ಡಿಎ ಪ್ರಯತ್ನಿಸುತ್ತಿದ್ದು, ಕಾಂಗ್ರೆಸ್, ಎಐಯುಡಿಎಫ್‌ನಂತಹ ಪ್ರಾದೇಶಿಕ ಪಕ್ಷಗಳ ನಡುವೆ ಹಣಾಹಣಿ ನಡೆಯಲಿದೆ.
ಪಶ್ಚಿಮ ಬಂಗಾಳದ ಮೇಲೆ ಕಣ್ಣು
2026 ರ ಪಶ್ಚಿಮ ಬಂಗಾಳ ಚುನಾವಣೆ ಬಿಜೆಪಿ ಪಾಲಿಗೆ ತುಂಬಾ ಪ್ರಮುಖವಾಗಿದ್ದು, ಪ್ರಸ್ತುತ ವಿಧಾನಸಭೆಯ ಅವಧಿ ಮೇನಲ್ಲಿ ಅಂತ್ಯವಾಗಲಿದೆ. ಈ ರಾಜ್ಯದಲ್ಲೂ ಕೂಡ ಆಸ್ಸಾಂ ಜೊತೆಗೆ ಚುನಾವಣೆ ನಡೆಯುವುದು ಪಕ್ಕಾ. 2011 ರಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ರಾಜ್ಯವನ್ನು ಆಳುತ್ತಿದೆ(ಏಜೆನ್ಸೀಸ್).