ದೇಶ

ಸಿಇಸಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ: ದೆಹಲಿಯಲ್ಲಿ ಸಾವಿರಾರು ಜನರ ಬಂಧನ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ | UN expresses concern

ಎಸ್​ಐಆರ್ ವಿವಾದ ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಮತ್ತು ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಸಾವಿರಾರು ಜನರ ಸಾಮೂಹಿಕ ಬಂಧನಗಳ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಕಳವಳ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ: ಎಸ್​ಐಆರ್ ವಿವಾದ ಮತ್ತು ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಮತ್ತು ಸಿಜೆಪಿ ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಸಾವಿರಾರು ಜನರ ಸಾಮೂಹಿಕ ಬಂಧನಗಳ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಕಳವಳ ವ್ಯಕ್ತಪಡಿಸಿದೆ.

ಈ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿ ಎಕ್ಸ್​ನಲ್ಲಿ ಪೋಸ್ಟ್ ಹಾಕಿದ್ದು, ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆಗಳ ಮೊದಲು ಮತ್ತು ಪ್ರತಿಭಟನೆಯ ಸಮಯದಲ್ಲಿ ಪ್ರತಿಭಟನಾಕಾರರು, ನಾಯಕರು, ಸಾಮಾಜಿಕ ಹೋರಾಟಗಾರರನ್ನು ಹಾಗೂ ಪತ್ರಕರ್ತರನ್ನು ಸಾಮೂಹಿಕವಾಗಿ ವಶಕ್ಕೆ ಪಡೆಯಲಾಗಿದೆ ಎಂಬ ವರದಿಗಳ ಬಗ್ಗೆ ನಮಗೆ ಕಳವಳವಿದೆ.

ಶಾಂತಿಯುತವಾಗಿ ಸಭೆ ಸೇರುವ ಹಕ್ಕನ್ನು ಸಂಪೂರ್ಣವಾಗಿ ಗೌರವಿಸಲಾಗುವುದು. ಮತ್ತು ಅದನ್ನ ಮಾಡಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ನಾವು ಅಧಿಕಾರಿಗಳಿಗೆ ಕರೆ ನೀಡುತ್ತೇವೆ. ಶಾಂತಿಯುತ ಪ್ರತಿಭಟನಾಕಾರರೊಂದಿಗೆ ವ್ಯವಹರಿಸುವಾಗ ತೀವ್ರ ಸಂಯಮ ವಹಿಸುವಂತೆ ಹೇಳಿದೆ.

ಮುಂದುವರೆದು, ನಿರಂಕುಶವಾಗಿ ಬಂಧಿಸಲ್ಪಟ್ಟ ಎಲ್ಲರನ್ನು ತಕ್ಷಣ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಬೇಕೆಂದು ಕರೆ ನೀಡಿದ್ದು, ಪ್ರತಿಭಟನಾಕಾರರು ಎತ್ತಿರುವ ಕಳವಳಗಳನ್ನು ಪರಿಹರಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದೆ.

ಚುನಾವಣಾ ವ್ಯವಸ್ಥೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಿಜೆಪಿ ಶನಿವಾರ ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಹೋರಾಟ ನಡೆಸಲು ತೀರ್ಮಾನಿಸಿತ್ತು. ಈ ಪ್ರತಿಭಟನೆಯು ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರಬಹುದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ, ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, ಅದರ ನಾಯಕರಾದ ರಾಂಕಾ, ದಾಸ್ ಸೇರಿದಂತೆ ಹಲವು ಪ್ರಮುಖ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಂತರ್ ಮಂತರ್ ಬಳಿ ನಡೆಯಬೇಕಿದ್ದ ಈ ಬೃಹತ್ ಪ್ರತಿಭಟನಾ ಸಭೆಯನ್ನು ತಡೆಯಲು ಪೊಲೀಸರು ಭಾರಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದು, ಮುಂಜಾಗೃತಾ ಕ್ರಮವಾಗಿ ನೂರಾರು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ (ಏಜೆನ್ಸೀಸ್).