Ajit Pawar plane crash | ಬಾರಾಮತಿ ವಿಮಾನ ದುರಂತ 
ದೇಶ

ಅಜಿತ್ ಪವಾರ್ ವಿಮಾನ ಅಪಘಾತದ ಹಿಂದೆ ಅಡಗಿವೆಯಾ 'ಕಾಣದ ಕೈ'ಗಳು? ಎಫ್‌ಐಆರ್​​ಗೆ ತಡೆಯೊಡ್ಡತ್ತಿರುವ ಆ ಪವರ್​ಪುಲ್​ ವ್ಯಕ್ತಿ ಯಾರು? | Ajit Pawar plane crash

ಪುಣೆ: ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ (Ajit Pawar plane crash) ಮಹಾರಾಷ್ಟ್ದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾನ ಕಂಪನಿ ವಿಎಸ್ಆರ್ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಎನ್‌ಸಿಪಿ ಶಾಸಕ ರೋಹಿತ್ ಪವಾರ್ ಒತ್ತಾಯಿಸಿದ್ದಾರೆ.
ಶಾಸಕ ಪವಾರ್​ ಮನವಿಯನ್ನು ಪೊಲೀಸರು ನಿರಾಕರಿಸಿದ್ದು, ಮಹಾರಾಷ್ಟ್ರ ಸಿಐಡಿ ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ, ಮತ್ತೊಂದು ಎಫ್‌ಐಆರ್ ದಾಖಲಿಸುವುದು ತನಿಖೆಗೆ ಸಮನಾಗಿರುತ್ತದೆ ಎಂದು ಹೇಳಿದರು.
ಶಾಸಕ ರೋಹಿತ್​ ಪವಾರ್​ ಮೊದಲು ಮುಂಬೈನ ಮೆರೈನ್ ಡ್ರೈವ್ ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದು, ಅಲ್ಲಿ ದೂರು ದಾಖಲಾಗಲಿಲ್ಲ. ಅದಾದ ಬಳಿಕ ಬಾರಾಮತಿ ತಾಲೂಕು ಪೊಲೀಸ್ ಠಾಣೆಗೆ ತೆರಳಿ ಪುಣೆ ಗ್ರಾಮೀಣ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದರು.
ಅಲ್ಲಿನ ಪೊಲೀಸರು ಸಹ ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದು, ನಂತರ ಪವಾರ್ ಪುಣೆಯಲ್ಲಿರುವ ಸಿಐಡಿ ಪ್ರಧಾನ ಕಚೇರಿಗೆ ತೆರಳಿ ಹಿರಿಯ ಅಧಿಕಾರಿಗಳೊಂದಿಗೆ ಸುಮಾರು 90 ನಿಮಿಷಗಳ ಕಾಲ ಮತ್ತೊಂದು ಸುತ್ತಿನ ಚರ್ಚೆ ನಡೆಸಿದರು ಎನ್ನಲಾಗಿದೆ.
ಇದಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಪವಾರ್, ಪೊಲೀಸರನ್ನು ಅನೇಕ ಬಾರಿ ಸಂಪರ್ಕಿಸಿದರೂ ನನ್ನ ದೂರನ್ನು ದಾಖಲಿಸಲಾಗುತ್ತಿಲ್ಲ. ವಿಮಾನ ಕಂಪನಿ ಮತ್ತು ನಿಯಂತ್ರಕ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಅವಶ್ಯಕತೆಯಿದೆ ಇದೆ ಎಂದು ಹೇಳಿದರು. ಇಂತಹ ಗಂಭೀರ ವಿಷಯದಲ್ಲಿ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದಾಗ, ಪ್ರಭಾವಿ ವ್ಯಕ್ತಿಗಳು ತೆರೆಮರೆಯಲ್ಲಿ ಭಾಗಿಯಾಗಿರಬಹುದು ಎಂಬ ಅನುಮಾನ ಹುಟ್ಟುತ್ತದೆ. ಒಟ್ಟಾರೆಯಾಗಿ ಸಂಪೂರ್ಣ ತನಿಖೆ ನಡೆದು ಸತ್ಯ ಹೊರಬರಬೇಕು ಎಂದು ರೋಹಿತ್​ ಹೇಳಿದರು.
ತನಿಖೆ ಪ್ರಗತಿಯಲ್ಲಿದೆ ಎಂದು ಸಿಐಡಿ ಅಧಿಕಾರಿಗಳು ತಿಳಿಸಿದ್ದು, ವಿಮಾನ ಅಪಘಾತದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಅಜಿತ್ ಪವಾರ್ ಮತ್ತು ಇತರರ ಆಕಸ್ಮಿಕ ಸಾವಿನ ತನಿಖೆಯನ್ನು ಸೆಕ್ಷನ್ 194 ರ ಅಡಿಯಲ್ಲಿ ಸಿಐಡಿಗೆ ವರ್ಗಾಯಿಸಲಾಗಿದೆ ಎಂದಿದ್ದಾರೆ.
ಘಟನೆಯ ಹಿಂದೆ ಯಾವುದೇ ವಿಧ್ವಂಸಕ ಕೃತ್ಯ, ನಿರ್ಲಕ್ಷ್ಯ ಅಥವಾ ಕ್ರಿಮಿನಲ್ ಪಿತೂರಿ ಇದೆಯೇ ಎಂದು ಪರಿಶೀಲಿಸುತ್ತಿದ್ದು, ಅನೇಕ ಸಂಸ್ಥೆಗಳನ್ನು ಬಳಸಿಕೊಂಡು  ಅವರ ವರದಿಗಳನ್ನು ಸಿಐಡಿ ತನಿಖೆಯಲ್ಲಿ ಸೇರಿಸಲಾಗುವುದು. ಕೆಲವು ಪುರಾವೆಗಳನ್ನು ಈಗಾಗಲೇ ಸಂಗ್ರಹಿಸಲಾಗಿದೆ ಮತ್ತು ಎಎಐಬಿ ವರದಿ ಬಂದ ನಂತರ ಅದನ್ನು ಸಹ ಸೇರಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ(ಏಜೆನ್ಸೀಸ್​).