ಸಾಂದರ್ಭಿಕ ಚಿತ್ರ 
ದೇಶ

ರುತುರಾಜ್, ಕಾರ್ತಿಕ್ ಭರ್ಜರಿ ಬ್ಯಾಟಿಂಗ್​; 8 ವಿಕೆಟ್​ಗಳ ಅಂತರದಿಂದ ಮುಂಬೈ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ​​​ | CSK vs MI

CSK vs MI: ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ 2026 ಆವೃತ್ತಿಯ ಮುಂಬೈ ಇಂಡಿಯನ್ಸ್​ ತಂಡದ ವಿರುದ್ಧದ ಪಂದ್ಯದಲ್ಲಿ​ ರುತುರಾಜ್ ಗಾಯಕ್ವಾಡ್ ಮತ್ತು ಕಾರ್ತಿಕ್ ಶರ್ಮಾ ಭರ್ಜರಿ ಬ್ಯಾಟಿಂಗ್​ನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 18.1 ಓವರ್​ಗಳಲ್ಲಿ 8 ವಿಕೆಟ್​ಗಳ ಅಂತರದಿಂದ ಗೆದ್ದು ಬೀಗಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ ಇಂಡಿಯನ್ಸ್​ ತಂಡ ನೀಡಿದ್ದ 160ರನ್​ಗಳ ಗುರಿ ಬೆನ್ನತ್ತಿದ್ದ ಚೆನ್ನೈ ತಂಡ, ನಾಯಕ ರುತುರಾಜ್ ಗೈಕ್ವಾಡ್ (67) ಮತ್ತು ಯುವ ಆಟಗಾರ ಕಾರ್ತಿಕ್ ಶರ್ಮಾ (54) ಅರ್ಧಶತಕದಾಟ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದೆ. ಮತ್ತು ಸಿಎಸ್​ಕೆ ತಂಡದ ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿದೆ.
ಗೆಲ್ಲಲೇಬೇಕಾದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅದ್ಭುತ ಬೌಲಿಂಗ್ ಕೂಡ ಗೆಲುವಿನಕಲ್ಲಿ ಪ್ರಮುಖ ಪಾತ್ರ ವಹಿಸಿತು. ಅನ್ಶುಲ್ ಕಾಂಬೋಜ್ 3 ವಿಕೆಟ್, ನೂರ್ ಅಹ್ಮದ್ 2 ವಿಕೆಟ್ ಪಡೆದು 20 ಓವರ್​ಗಳಲ್ಲಿ 159ರನ್​ಗಳಿಗೆ ಸೀಮಿತಗೊಳಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಬ್ಯಾಟರ್​ಗಳು ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ. ಮುಂಬೈ ಇಂಡಿಯನ್ಸ್ ಪರ ನಮನ್ ಧೀರ್ ಅರ್ಧಶತಕ ಗಳಿಸಿದರು. 37 ಎಸೆತಗಳಲ್ಲಿ 4 ಬೌಂಡರಿ ಮತ್ತು ಮೂರು ಸಿಕ್ಸರ್ ಸಿಡಿಸಿ 57 ರನ್ ಗಳಿಸಿದ್ದು ಮತ್ತು ರಯಾನ್ ರಿಕಲ್ಟನ್ 37 ರನ್​ಗಳ ಆಟ ತಂಡ 159 ರನ್​ಗಳನ್ನು ಕಲೆ ಹಾಕಿತ್ತು (ಏಜೆನ್ಸೀಸ್).