ಧಾನ ಅರ್ಚಕ ಕಂದರಾರು ರಾಜೀವರು 
ದೇಶ

ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣ: ದೇವಾಲಯದ ಪ್ರಧಾನ ಅರ್ಚಕ ಬಂಧನ | Priest Arrested

ತಿರುವನಂತಪುರಂ: ಕೇರಳದಲ್ಲಿ ತೀವ್ರ ಸಂಚಲನ ಉಂಟು ಮಾಡಿರುವ ಶಬರಿಮಲೆ ದೇವಸ್ಥಾನದ ಚಿನ್ನ ಕಳ್ಳತನ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಎಸ್​ಐಟಿ, ಶುಕ್ರವಾರ(ಜ. 09) ದೇವಾಲಯದ ಪ್ರಧಾನ ಅರ್ಚಕ ಕಂದರಾರು ರಾಜೀವರನ್ನು ಬಂಧಿಸಿದೆ ಎಂದು ವರದಿಯಾಗಿದೆ.
ಪ್ರಕರಣ ಸಂಬಂಧ ನಿನ್ನೆ ಬೆಳಗ್ಗೆ ಎಸ್‌ಐಟಿ ಅಧಿಕಾರಿಗಳು ರಾಜೀವರನ್ನು ವಿಚಾರಣೆಗೆ ಕರೆದೊಯ್ದಿದ್ದರು. ಬಳಿಕ ಮಧ್ಯಾಹ್ನ ತಮ್ಮ ಕಚೇರಿಯಲ್ಲಿ ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಿರುವಾಂಕೂರು ದೇವಸ್ವಂ ಮಂಡಳಿಯ ಅಧ್ಯಕ್ಷ ಪದ್ಮಕುಮಾರ್ ನೀಡಿದ ಹೇಳಿಕೆಗಳ ಆಧಾರದ ಮೇಲೆ ಮುಖ್ಯ ಅರ್ಚಕರನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಪ್ರಕರಣದಲ್ಲಿ ಇಲ್ಲಿಯವರೆಗೆ 11 ಮಂದಿಯನ್ನು ಬಂಧಿಸಿದಂತಾಗಿದೆ.
ಶಬರಿಮಲೆ ದೇವಸ್ಥಾನದ ದ್ವಾರಪಾಲಕರ ವಿಗ್ರಹಗಳ ಚಿನ್ನದ ಹೊದಿಕೆಗಳು ಮತ್ತು ಶ್ರೀಕೋವಿಲ್ ದ್ವಾರದ ಚಿನ್ನದ ಹೊದಿಕೆಗಳ ಮೇಲೆ ಚಿನ್ನದ ಮರು ಲೇಪನ ಮಾಡಲು ಸಲಹೆ ನೀಡಿದವರು ಮುಖ್ಯ ಅರ್ಚಕರು ಎಂದು ಎಸ್‌ಐಟಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎಸ್​ಐಟಿ, ಪ್ರಕರಣದಲ್ಲಿ ಆರೋಪಿಗಳಾದ ಉನ್ನಿಕೃಷ್ಣನ್, ಚೆನ್ನೈ ಮೂಲದ ಗೋವರ್ಧನ್ ಮತ್ತು ಸ್ಮಾರ್ಟ್ ಕ್ರಿಯೇಷನ್ಸ್ ಸಿಇಒ ಪಂಕಜ್ ಭಂಡಾರಿ ಅವರೊಂದಿಗೆ ದೇವಾಲಯದಲ್ಲಿರುವ ಎಲ್ಲಾ ಚಿನ್ನ ಲೇಪಿತ ತಾಮ್ರ ಹಾಳೆಗಳಿಂದ ಚಿನ್ನವನ್ನು ಹೊರತೆಗೆಯಲು ಕ್ರಿಮಿನಲ್ ಪಿತೂರಿ ನಡೆಸಿದ್ದಾರೆ. ಅದರಲ್ಲಿ ಉಳಿದ ಎಲ್ಲಾ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದೆ (ಏಜೆನ್ಸೀಸ್).