ಸಾಂದರ್ಭಿಕ ಚಿತ್ರ 
ದೇಶ

ಬಾಂಗ್ಲಾದೇಶದ ಭಾರತೀಯ ರಾಯಭಾರಿ ಕಚೇರಿ ಆವರಣದಲ್ಲಿ ಭಾರತೀಯ ಭದ್ರತಾ ಅಧಿಕಾರಿ ಶವ ಪತ್ತೆ | Bangladesh

ಢಾಕಾ: ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ನಿಯೋಜಿತರಾಗಿದ್ದ ಭಾರತೀಯ ಮೂಲದ ಶಿಷ್ಟಾಚಾರ ಅಧಿಕಾರಿಯಾಗಿದ್ದ ನರೇನ್ ಧರ್ ಅವರ ಶವ ಅನುಮಾನಸ್ಪದವಾಗಿ ಪತ್ತೆಯಾಗಿದೆ ಎಂದು ಮಂಗಳವಾರ(ಮೇ 19) ವರದಿಯಾಗಿದೆ.
ಈ ಕುರಿತು ಮಾತನಾಡಿರುವ ಚಿತ್ತಗಾಂಗ್ ನಗರ ಪೊಲೀಸ್ ಸಹಾಯಕ ಆಯುಕ್ತ ಅಮಿನೂರ್ ರಶೀದ್, ಮಂಗಳವಾರ ಬೆಳಿಗ್ಗೆ ಬಾಂಗ್ಲಾದೇಶ ಪೊಲೀಸರು ಧರ್ ಅವರ ಮೃತದೇಹವನ್ನು ಭಾರತೀಯ ಸಹಾಯಕ ಹೈಕಮಿಷನ್ ಕಚೇರಿಯಿಂದ ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಧರ್ ಭಾರತೀಯ ಸಹಾಯಕ ಹೈಕಮಿಷನ್‌ನಲ್ಲಿ ಪ್ರೋಟೋಕಾಲ್ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ 9:30ರ ಸುಮಾರಿಗೆ ಅವರ ಶವವನ್ನು ವಶಪಡಿಸಿಕೊಂಡು ಶವಪರೀಕ್ಷೆಗಾಗಿ ಸಿಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಧರ್ ಸಾವಿನ ಬಗ್ಗೆ ಬಾಂಗ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ. ಘಟನೆಯ ಬಗ್ಗೆ ಭಾರತೀಯ ರಾಯಭಾರ ಕಚೇರಿ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ (ಏಜೆನ್ಸೀಸ್).