ದೇಶ

ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್​​ | L. K. Advani

ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು(ಅ. 19) ಅವರನ್ನು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವರದಿಯಾಗಿದೆ.

ನವದೆಹಲಿ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಇಂದು(ಅ. 19) ಅವರನ್ನು ದೆಹಲಿಯ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವರದಿಯಾಗಿದೆ.

ಚೆಸ್ಟ್ ಇನ್ಸ್​ಪೆಕ್ಷನ್​ನಿಂದ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅ.16ರಂದು ಎಲ್.ಕೆ. ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗಿತ್ತು. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವಯೋಸಹಜ ಖಾಯಿಲೆಗಳಿಂದ ಮೇ ತಿಂಗಳಲ್ಲೂ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು. 2024ರಲ್ಲೂ ಅವರನ್ನು ಅಪೋಲೋ ಮತ್ತು ಐಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಸೇರಿದಂತೆ ಹಲವಾರು ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇತ್ತೀಚೆಗೆ ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಅ. 7ರಂದು ಅಡ್ವಾಣಿ ಅವರನ್ನು ಅವರ ದೆಹಲಿ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದರು. ಬಳಿಕ ಅಡ್ವಾಣಿ ಅವರ ದಶಕಗಳ ಸಾರ್ವಜನಿಕ ಸೇವೆಯು ರಾಷ್ಟ್ರೀಯ ಜೀವನದ ಮೇಲೆ ಅಳಿಸಲಾಗದ ಛಾಪು ಮೂಡಿಸಿದೆ ಎಂದು ಹೇಳಿದ್ದರು.

2024ರಲ್ಲಿ ಎಲ್​.ಕೆ.ಅಡ್ವಾಣಿಯವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನಿ ಮೋದಿ ಅವರು ಸ್ವತಃ ಅಡ್ವಾಣಿಯವರ ಮನೆಗೆ ಹೋಗಿ ಪ್ರಧಾನ ಮಾಡಿದ್ದರು (ಏಜೆನ್ಸೀಸ್).