Sonia Gandhi 
ದೇಶ

ಸಣ್ಣ ಶಸ್ತ್ರಚಿಕಿತ್ಸೆಗಾಗಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು..Sonia Gandhi

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು.
  • ಹರಿಯಾಣದ ಗುರುಗ್ರಾಮದ ಪ್ರಮುಖ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಯಕಿ.
  • ಸಣ್ಣ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿರುವ ಮಾಜಿ ಕಾಂಗ್ರೆಸ್ ಅಧ್ಯಕ್ಷೆ.
ಗುರುಗ್ರಾಮ: ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ನಾಯಕಿ ಹಾಗೂ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರು ತಡರಾತ್ರಿ ಹರಿಯಾಣದ ಗುರುಗ್ರಾಮದ ಪ್ರಮುಖ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಒಂದು ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಅದಕ್ಕಾಗಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರು ವೈದ್ಯರ ಕಣ್ಗಾವಲಿನಲ್ಲಿದ್ದಾರೆ ಎನ್ನಲಾಗಿದೆ.
79 ವರ್ಷದ ಸೋನಿಯಾ ಗಾಂಧಿಯವರು ರಾಜ್ಯಸಭಾ ಸಂಸದೆಯಾಗಿ ಈ ಇಳಿವಯಸ್ಸಿನಲ್ಲಿಯೀ ವೃತ್ತಿ ನಿರ್ಮಿಸುತ್ತಿದ್ದಾರೆ. ಇತ್ತೀಚೆಗೆ ಹಲವಾರು ಬಾರಿ ಆರೋಗ್ಯ ಸಂಬಂಧಿತ ಸಮಸ್ಯೆಗೆ ಒಳಪಟ್ಟು ದೆಹಲಿ ಸೇರಿದಂತೆ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಮಾರ್ಚ್​ನಲ್ಲಿಯೂ ಅವರು ಅಸ್ವಸ್ಥರಾಗಿದ್ದ ಅವರ ಮಕ್ಕಳಾದ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹಾರೈಕೆ ಮಾಡಿದ್ದರು.

ಸಣ್ಣ ಶಸ್ತ್ರ ಚಿಕಿತ್ಸೆ

ಸೋನಿಯಾ ಗಾಂಧಿಯವರು ಎಂದಿನಂತೆ ನಿಯಮಿತ ವೈದ್ಯಕೀಯ ತಪಾಸಣೆ ಹಾಗೂ ಸಣ್ಣ ಶಸ್ತ್ರಚಿಕಿತ್ಸೆಯ ಪ್ರಕ್ರಿಯೆಗಳಿಗಾಗಿ ಗುರುಗ್ರಾಮದ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯವಿರುವ ಆಸ್ಪತ್ರೆಗೆ ಆಗಮಿಸಿದ್ದರು.
ವೈದ್ಯರ ಸಲಹೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಮತ್ತು ಶಸ್ತ್ರಚಿಕಿತ್ಸೆಯ ಪೂರ್ವ ಸಿದ್ಧತೆಗಳಿಗಾಗಿ ಅವರನ್ನು ಆಸ್ಪತ್ರೆಯಲ್ಲೇ ಉಳಿಸಿಕೊಳ್ಳಲಾಗಿದೆ. ಸದ್ಯ ಹಿರಿಯ ವೈದ್ಯರ ತಂಡವೊಂದು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದೆ.
ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆಯೇ ಅವರ ಕುಟುಂಬದ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಆಸ್ಪತ್ರೆಯಲ್ಲೇ ಉಳಿದು ತಾಯಿಯ ಆರೈಕೆ ಮಾಡುತ್ತಿದ್ದಾರೆ ಎನ್ನಲಾಗಿದೆ, (ಏಜೆನ್ಸೀಸ್).