ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್​ಕೂಟತ್ತಿಲ್ 
ದೇಶ

ಲೈಂಗಿಕ ಕಿರುಕುಳ ಆರೋಪ; ಕಾಂಗ್ರೆಸ್ ಶಾಸಕ ರಾಹುಲ್ ಮಮ್​ಕೂಟತ್ತಿಲ್ ವಿರುದ್ಧ ಮತ್ತೊಬ್ಬ ಮಹಿಳೆಯಿಂದ ಸಿಎಂಗೆ ದೂರು | Rahul Mamkootathil

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎದುರಿಸುತ್ತಿದರುವ ಕೇರಳದ ಪಾಲಕ್ಕಾಡ್ ಕಾಂಗ್ರೆಸ್ ಶಾಸಕ ರಾಹುಲ್ ಮಮ್​ಕೂಟತ್ತಿಲ್(Rahul Mamkootathil) ವಿರುದ್ಧ ಮತ್ತೊಬ್ಬ ಮಹಿಳೆ ಗುರುವಾರ(ನ. 27) ಕೇರಳ ಸಿಎಂ ಪಿಣರಾಯಿ ವಿಜಯನ್​ಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಸಂತ್ರಸ್ತೆ ದೂರುದಾರ ಮಹಿಳೆ ಗುರುವಾರ ಖುದ್ದಾಗಿ ಸಿಎಂ ಪಿಣರಾಯಿ ಕಚೇರಿಯಲ್ಲಿ ಭೇಟಿಯಾಗಿ ದೂರು ನೀಡಿದ್ದು, ಜೊತೆಗೆ ಕಿರುಕುಳಕ್ಕೆ ಸಂಬಂಧಪಟ್ಟ ಡಿಜಿಟಲ್ ಪುರಾವೆಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ರಾಹುಲ್ ಮಹಿಳೆಯೊಬ್ಬರನ್ನು ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸುತ್ತಿರುವ ಧ್ವನಿ ತುಣುಕುಗಳು ಈ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು.
ನಿನ್ನೆ ಸಂತ್ರಸ್ತೆ ನೀಡಿದ ದೂರನ್ನು ಸಿಎಂ ದೂರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ವರ್ಗಾಯಿಸಿದ್ದಾರೆ. ಶಾಸಕರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಿದೆ ಎಂದು ವರದಿಗಳು ಉಲ್ಲೇಖಿಸಿವೆ.
ತಮ್ಮ ವಿರುದ್ಧದ ಆರೋಪಗಳಿಗೆ ಇತ್ತೀಚೆಗೆ ಫೇಸ್​ಬುಕ್​ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ನನಗೆ ಮನವರಿಕೆಯಾಗುವವರೆಗೆ, ನಾನು ಕಾನೂನುಬದ್ಧವಾಗಿ ಹೋರಾಡುವುದನ್ನು ಮುಂದುವರಿಸುತ್ತೇನೆ. ಕಾನೂನಿನ ನ್ಯಾಯಾಲಯದಲ್ಲಿ ಮತ್ತು ಜನರ ನ್ಯಾಯಾಲಯದಲ್ಲಿ ಎಲ್ಲವನ್ನೂ ಸಾಬೀತುಪಡಿಸುತ್ತೇನೆ. ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ಬರೆದಿದ್ದಾರೆ.
ಪಾಲಕ್ಕಾಡ್ ಹಾಲಿ ಶಾಸಕರಾಗಿದ್ದ ಮತ್ತು ಕಾಂಗ್ರೆಸ್ ನಾಯಕ ಶಾಫಿ ಪರಂಬಿಲ್ ಲೋಕಸಭೆ ಚುನಾವಣೆಯಲ್ಲಿ ವಟಕಾರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ಕಳೆದ ವರ್ಷ ನವೆಂಬರ್​ನಲ್ಲಿ ನಡೆದ ಉಪಚುನಾವಣೆಯಲ್ಲಿ ರಾಹುಲ್ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ (ಏಜೆನ್ಸೀಸ್).