ವಿಜಯ್‌ಗೆ ಸ್ವಪಕ್ಷದ ಶಾಸಕರಿಂದಲೇ ಸವಾಲು WEB
ದೇಶ

6 ತಿಂಗಳ ಆಡಳಿತ ಪೂರ್ಣಗೊಳಿಸಿದ ವಿಜಯ್‌ಗೆ ಸ್ವಪಕ್ಷದ ಶಾಸಕರಿಂದಲೇ ಸವಾಲು: ಇಬ್ಬರು ನಾಯಕರ ವಿರುದ್ಧ ಗಂಭೀರ ಆರೋಪ! CM Vijay

ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರ್ಣಗೊಳಿಸಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಜಯ್ ಅವರಿಗೆ ತಮ್ಮದೇ ಪಕ್ಷದ ಶಾಸಕರ ವಿರುದ್ಧ ಕೇಳಿಬಂದಿರುವ ಆರೋಪಗಳು ಹೊಸ ಸವಾಲಾಗಿ ಪರಿಣಮಿಸಿವೆ. ಶಾಸಕರ ವಿರುದ್ಧದ ದೂರುಗಳ ವಿಚಾರದಲ್ಲಿ ವಿಜಯ್ ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.CM Vijay

ಚೆನ್ನೈ: ತಮಿಳುನಾಡಿನಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರ್ಣಗೊಳಿಸಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಜಯ್ ಅವರಿಗೆ ತಮ್ಮದೇ ಪಕ್ಷದ ಶಾಸಕರ ವಿರುದ್ಧ ಕೇಳಿಬಂದಿರುವ ಆರೋಪಗಳು ಹೊಸ ಸವಾಲಾಗಿ ಪರಿಣಮಿಸಿವೆ. ಶಾಸಕರ ವಿರುದ್ಧದ ದೂರುಗಳ ವಿಚಾರದಲ್ಲಿ ವಿಜಯ್ ಯಾವ ರೀತಿಯ ಕ್ರಮ ಕೈಗೊಳ್ಳಲಿದ್ದಾರೆ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ.

ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗೆ ಆಡಳಿತ ಪಕ್ಷದ ಶಾಸಕ ಸಿ. ಅರುಳ್ ವಿಘ್ನೇಶ್ ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಜಿಲ್ಲಾಧಿಕಾರಿ ಮುಖ್ಯ ಕಾರ್ಯದರ್ಶಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಸಂಸದೆ ಜ್ಯೋತಿಮಣಿ ಹೇಳಿಕೊಂಡಿದ್ದಾರೆ. ಆದರೆ ದೂರು ಸಲ್ಲಿಕೆಯಾಗಿರುವ ಬಗ್ಗೆ ಅಧಿಕೃತ ದೃಢೀಕರಣ ಇನ್ನೂ ಲಭ್ಯವಾಗಿಲ್ಲ. ಇತ್ತ ಶಾಸಕ ಅರುಳ್ ವಿಘ್ನೇಶ್ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.

ಇನ್ನೊಂದೆಡೆ, ತುರೈಯೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಸಂಗ್ರಹವಾಗಿರುವ ಕಸವನ್ನು ತೆರವುಗೊಳಿಸದಿರುವ ಬಗ್ಗೆ ಸ್ಥಳೀಯ ನಿವಾಸಿ ಕಾರ್ತಿಕ್ ಕುಮಾರ್ ಶಾಸಕ ಎಂ. ರವಿಶಂಕರ್ ಅವರಿಗೆ ದೂರು ನೀಡಿದ್ದರು. ಈ ಸಂದರ್ಭದಲ್ಲಿ ಶಾಸಕ ತಮ್ಮ ಮೇಲೆ ಹಲ್ಲೆ ನಡೆಸಿ, ಕಪಾಳಮೋಕ್ಷ ಮಾಡಿ ಒದ್ದಿದ್ದಾರೆ ಎಂದು ಕಾರ್ತಿಕ್ ಕುಮಾರ್ ಆರೋಪಿಸಿದ್ದಾರೆ. ಗಮನಾರ್ಹ ಸಂಗತಿಯೆಂದರೆ, ರವಿಶಂಕರ್ ತಮಿಳುನಾಡು ವಿಧಾನಸಭೆಯ ಉಪಸಭಾಪತಿಯಾಗಿದ್ದಾರೆ.

ಇದನ್ನೂ ಓದಿ : ರಾವಣನ ಅವತಾರದಲ್ಲಿ ಮಕ್ಕಳ ಜತೆ ಯಶ್ ಸೆಲ್ಫಿ! ದೀಪಾವಳಿ ಫೋಟೋ ಹಂಚಿಕೊಂಡ ರಾಕಿಂಗ್ ಸ್ಟಾರ್‌ಗೆ ಫ್ಯಾನ್ಸ್ ಫಿದಾ...ramayana rash

ಈ ಪ್ರಕರಣ ಮತ್ತಷ್ಟು ವಿವಾದಕ್ಕೆ ಕಾರಣವಾಗಿದ್ದು, ಕಾರ್ತಿಕ್ ಕುಮಾರ್ ನಂತರ ಶಾಸಕರ ಪಕ್ಕದಲ್ಲಿ ಕುಳಿತು ಹಲ್ಲೆಯಾಗಿಲ್ಲ ಎಂದು ಹೇಳಿಕೆ ನೀಡಿರುವ ವಿಡಿಯೋವೂ ಬಹಿರಂಗವಾಗಿದೆ. ಆದರೆ ತಮ್ಮ ಮೇಲೆ ಒತ್ತಡ ಹೇರಿ ಈ ಹೇಳಿಕೆ ನೀಡುವಂತೆ ಮಾಡಲಾಗಿದೆ ಎಂದು ಅವರು ಮತ್ತೊಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ಹೀಗಾಗಿ ಪ್ರಕರಣದ ಸುತ್ತ ಹಲವು ಪ್ರಶ್ನೆಗಳು ಎದ್ದಿವೆ.

ವಿಜಯ್ ಮುಂದಿರುವ ಸವಾಲೇನು?

ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದಿರುವ ಸಂದರ್ಭದಲ್ಲಿ ಸ್ವಪಕ್ಷದ ಶಾಸಕರ ವಿರುದ್ಧವೇ ಇಂತಹ ಆರೋಪಗಳು ಕೇಳಿಬಂದಿರುವುದು ರಾಜಕೀಯವಾಗಿ ಗಮನ ಸೆಳೆದಿದೆ. ಆರೋಪಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವುದು, ದೂರುದಾರರಿಗೆ ನ್ಯಾಯ ಒದಗಿಸುವುದು ಹಾಗೂ ಪಕ್ಷದ ಶಾಸಕರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿ ವಿಜಯ್ ಮುಂದಿರುವ ಪ್ರಮುಖ ಜವಾಬ್ದಾರಿಗಳಾಗಿವೆ.

ವಿಶೇಷವಾಗಿ ವಿಧಾನಸಭೆಯ ಉಪಸಭಾಪತಿಯ ವಿರುದ್ಧವೇ ಹಲ್ಲೆಯ ಆರೋಪ ಕೇಳಿಬಂದಿರುವುದು ಪ್ರಕರಣದ ಮಹತ್ವವನ್ನು ಹೆಚ್ಚಿಸಿದೆ. ಆರೋಪಗಳು ಸಾಬೀತಾಗುವ ಮುನ್ನವೇ ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲವಾದರೂ, ಈ ಪ್ರಕರಣಗಳ ಬಗ್ಗೆ ಸರ್ಕಾರ ಕೈಗೊಳ್ಳುವ ಮುಂದಿನ ಕ್ರಮದ ಮೇಲೆ ಎಲ್ಲರ ಗಮನ ನೆಟ್ಟಿದೆ. ತಮ್ಮ ಪಕ್ಷದ ಶಾಸಕರ ವಿರುದ್ಧ ಕೇಳಿಬಂದಿರುವ ಆರೋಪಗಳ ವಿಚಾರದಲ್ಲಿ ವಿಜಯ್ ಎಷ್ಟು ದೂರ ಹೋಗಬಲ್ಲರು? ತಪ್ಪು ಸಾಬೀತಾದರೆ ತಮ್ಮದೇ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೇ? ಎಂಬ ಪ್ರಶ್ನೆಗಳು ಇದೀಗ ತಮಿಳುನಾಡು ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.