ಘಟನೆಯ ಸ್ಥಳ 
ದೇಶ

ಟ್ಯಾಂಕರ್​ಗೆ ಡಿಕ್ಕಿ ಹೊಡೆದ ಬಳಿಕ ಹೊತ್ತಿ ಉರಿದ ಸ್ಲೀಪರ್ ಕೋಚ್ ಬಸ್; ನಾಲ್ವರು ಸಾವು, 10 ಮಂದಿಗೆ ಗಾಯ | Sleeper coach bus

ಅಹ್ಮದಾಬಾದ್: ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ಇಂದು(ಮೇ 14) ಮುಂಜಾನೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಐಷರಾಮಿ ಸ್ಪೀಪರ್ ಕೋಚ್ ಬಸ್(Sleeper coach bus) ಟ್ಯಾಂಕರ್​ಗೆ ಡಿಕ್ಕಿ ಹೊಡೆದ ಬಳಿಕ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ನಾಲ್ವರು ಸಜೀವದಹನವಾಗಿದ್ದು, 10 ಮಂದಿಗೆ ಗಂಭೀರ ಗಾಯಗಳಾಗಿವೆ.
ಚೋಟಿಲಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಂಗನಿ ಗ್ರಾಮದ ಬಳಿ ಬೆಳಗಿನ ಜಾವ 2.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅಹ್ಮದಾಬಾದ್​ನಿಂದ ರಾಜ್ ಕೋಟ್ ಕಡೆಗೆ ಹೋಗುತ್ತಿದ್ದ ಖಾಸಗಿ ಐಷಾರಾಮಿ ಬಸ್, ಮುಂದೆ ಚಲಿಸುತ್ತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದಲ್ಲಿ ಎರಡೂ ವಾಹನಗಳು ಸುಟ್ಟು ಹೋಗಿವೆ. ಗಾಯಾಳುಗಳನ್ನು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ
ಈ ಕುರಿತು ಮಾತನಾಡಿರುವ ಉಪ ಪೊಲೀಸ್ ವರಿಷ್ಠಾಧಿಕಾರಿ ಎಸ್.ಎಸ್. ಭಡೋರಿಯಾ, ರಸ್ತೆಯಲ್ಲಿ ಹೋಗುತ್ತಿದ್ದ ಟ್ಯಾಂಕರ್​ನ ಟೈರ್ ಸಿಡಿದ ಕಾರಣ ಅಪಘಾತ ಸಂಭವಿಸಿದೆ. ಬಸ್ ಚಾಲಕನ​ ನಿಯಂತ್ರಣ ತಪ್ಪಿ ಹಿಂಭಾಗದಿಂದ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ತಕ್ಷಣದ ಕಿಡಿ ಮತ್ತು ಬೆಂಕಿ ಕಾಣಿಸಿಕೊಂಡಿತು. ಟ್ಯಾಂಕರ್ ಏನನ್ನು ಹೊತ್ತೊಯ್ಯುತ್ತಿತ್ತು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ (ಏಜೆನ್ಸೀಸ್).