ಪೈಫ್​ಲೈನ್​ ಕೆಲಸ ಮಾಡುತ್ತಿದ್ದ ಮಹೇಂದ್ರ ಮೃತ ದುರ್ದೈವಿ 
ದೇಶ

ಕಾರ್ಮಿಕನ ಮೇಲೆ ಕುಸಿದ ಮಣ್ಣು: ಸಜೀವ ಸಮಾಧಿಯಾದ ಮಹೇಂದ್ರ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ! Viral Video

ಪ್ರಮುಖ ಮುಖ್ಯಾಂಶಗಳು

  • ಅಲಿಗಢದಲ್ಲಿ ಕಾರ್ಮಿಕನ ಮೇಲೆ ಕುಸಿದ ಧರೆ!
  • ಪೈಫ್​ಲೈನ್​ ಕೆಲಸ ಮಾಡುತ್ತಿದ್ದ ಮಹೇಂದ್ರ ಮೃತ ದುರ್ದೈವಿ
  • ಸೋಷಿಯಲ್​ ಮೀಡಿಯಾನಲ್ಲಿ ವಿಡಿಯೋ ವೈರಲ್​
ಅಲಿಗಢ್​: ಶನಿವಾರ (ಏ.25) ಉತ್ತರ ಪ್ರದೇಶದ ಅಲಿಗಢದಲ್ಲಿ ರಸ್ತೆ ಕೆಳಗಿನ ಪೈಫ್​ಲೈನ್​ ದುರಸ್ತಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕನ ಮೇಲೆ ಮಣ್ಣು ಕುಸಿದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.  ಈ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸೋಷಿಯಲ್​ ಮೀಡಿಯಾನಲ್ಲಿ ವೈರಲ್​ (Viral Video) ಆಗುತ್ತಿದೆ.

ವಿಡಿಯೋನಲ್ಲೇನಿದೆ?

ವೈರಲ್​ ಆಗುತ್ತಿರುವ ವಿಡಿಯೋನಲ್ಲಿ, ಮಹೇಂದ್ರ ಸಿಂಗ್ ಎನ್ನುವ ಕಾರ್ಮಿಕ ರಸ್ತೆಯೊಳಗೆ ತೆಗೆದಿರುವ ಗುಂಡುಯಲ್ಲಿ ಇಳಿದು ಪೈಫ್​ಲೈನ್​ ಸರಿ ಮಾಡುವ ಕೆಲಸದಲ್ಲಿ ನಿರತನಾಗಿರುತ್ತಾನೆ. ಆಗ ಒಂದೇ ಸಮನೆ ಪಕ್ಕದಲ್ಲಿದ್ದ ಮಣ್ಣು ಕುಸಿದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾನೆ. 
ಕೂಡಲೇ ಸ್ಥಳದಲ್ಲಿದ್ದ ಇತರ ಇಬ್ಬರು ಮಹೇಂಸ್ರನನ್ನು ಹೊರತೆಗೆಯಲು ಹರ ಸಾಹಸ ಪಟ್ಟಿದ್ದಾರೆ. ಸ್ಥಳದಲ್ಲಿದ್ದ ಬುಲ್ಡೋಜರ್​ ಮೂಲಕ ಮಣ್ಣನ್ನು ಎತ್ತಲು ಪ್ರಯತ್ನ ಪಟ್ಟಿದ್ದಾರೆ. ಅದರೆ ಮಹೇಂದ್ರ ಸ್ಥಳದಲ್ಲೇ ಸಾವನ್ನಪ್ಪಿರುವುದು ಖಚಿತವಾಗಿದೆ. 

ಮಗನ ಸಾವಿಗೆ ಅಧಿಕಾರಿಗಳೇ ಕಾರಣ

ಮಹೇಂದ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮ ಮಗನ ಸಾವಿಗೆ ಅಧಿಕಾರಿಗಳೇ ಕಾರಣ, ಅವರು ಸರಿಯಾದ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಂಡಿದ್ದರೆ ಮಹೇಂದ್ರನ ಸಾವು ಸಂಭವಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. 

ನೆಟ್ಟಿಗರ ಆಕ್ರೋಶ!

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರ ಕೋಪ ನೆತ್ತಿಗೇರಿದೆ. ಯಾವುದೇ ರೀತಿಯ ಸುರಕ್ಷತಾ ಕ್ರಮವಿಲ್ಲದೆ ಅದು ಹೇಗೆ ಅವನನ್ನು ಕೆಲಸಕ್ಕೆ ತೆಗೆದುಕೊಂಡಿರಿ? ಎಂದು ಒಬ್ಬರು ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಕಾರ್ಮಿಕರ ಜೀವಕ್ಕೆ ಬೆಲೆಯೇ ಇಲ್ಲವಾಗಿದೆ ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ, (ಏಜನ್ಸೀಸ್​).