26 ದಿನಗಳ ನಂತರ ಸತ್ಯಾಗ್ರಹ ಹಿಂಪಡೆದ ಸೋನಮ್ ವಾಂಗ್‌ಚುಕ್
- 26 ದಿನಗಳ ನಂತರ ಸತ್ಯಾಗ್ರಹ ಹಿಂಪಡೆದ ಸೋನಮ್ ವಾಂಗ್‌ಚುಕ್
- ಸೋನಮ್ ವಾಂಗ್‌ಚುಕ್ ಆರೋಗ್ಯ ಚೇತರಿಕೆಗೆ ಮೋದಿ ಹಾರೈಕೆ
- ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಸಿಜೆಪಿ ಪಟ್ಟು!
ನವದೆಹಲಿ: ನೀಟ್ ಸೇರಿದಂತೆ ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಪರಿಸರವಾದಿ ಸೋನಮ್ ವಾಂಗ್‌ಚುಕ್ (Sonam Wangchuk ends Hunger Strike) ಸತತ 26 ದಿನಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಹಿಂತೆಗೆದುಕೊಂಡಿದ್ದಾರೆ.
ಸರ್ಕಾರ ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂದೇಶ ಹಂಚಿಕೊಂಡ ಬೆನ್ನಲ್ಲೆ ಈ ಬೆಳವಣಿಗೆ ಕಂಡು ಬಂದಿದೆ.
ಸೋನಮ್ ಅವರ ಆರೋಗ್ಯ ಚೇತರಿಕೆ ಆಗಲಿ!
ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ ಈಗಾಗಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತು ಇಂದು ನಡೆಯಲಿರುವ ಕ್ಯಾಬಿನೆಟ್ನಲ್ಲಿ ಸಭೆ ನಡೆಸಿ ಮಳೆಗಾಲದ ಅಧಿವೇಶನದಲ್ಲಿ ಮಸೂದೆಯನ್ನು ಅಂಗೀಕಾರ ಮಾಡುವುದಾಗಿ ಪ್ರಧಾನಿಗಳು ಭರವಸೆ ನೀಡಿದ್ದಾರೆ.
ಸೋನಮ್ ವಾಂಗ್‌ಚುಕ್ ಉಪವಾಸವನ್ನು ನಿಲ್ಲಿಸಿದನ್ನು ಸ್ವಾಗತಿಸಿರುವ ಪ್ರಧಾನಿಗಳು, ಅವರ ಆರೋಗ್ಯ ಬೇಗ ಚೇತರಿಗೆ ಕಾಣಲಿ, ಹಾಗೂ ವೈದ್ಯರು ನೀಡುವ ಸಲಹೆಯನ್ನು ಅವರು ಪಾಲಿಸಲಿ ಎಂದು ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.
ನಮ್ಮ ಹೋರಾಟ ಮುಂದುವರಿಯುತ್ತದೆ!
ಸೋನಮ್ ವಾಂಗ್‌ಚುಕ್ ಅವರು ಉಪವಾಸ ನಿಲ್ಲಿಸಿದಕ್ಕೆ, ಅಭಿನಂದನೆ ವ್ಯಕ್ತ ಪಡಿಸಿರುವ ಸಿಜೆಪಿ ಸ್ಥಾಪಕ ಅಭಿಜಿತ್ ದಿಪ್ಕೆ, ಈ ಹೋರಾಟಕ್ಕಾಗಿ ನೀವು ನಿಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡಿದಿರಿ. ಆದರೆ ನಮ್ಮ ಪ್ರತಿಭಟನೆ ಇಲ್ಲಿಗೆ ನಿಲ್ಲಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ, (ಏಜನ್ಸೀಸ್).