ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ವಿರುದ್ಧ ಮೀಸಾ ಕಾಯ್ದೆಯಡಿ ಅವರ ಬಂಧನವನ್ನು ಉಲ್ಲೇಖಿಸಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಸಿಎಂ ವಿಜಯ್(CM Vijay), ಸಚಿವ ಟಿ.ನಿರ್ಮಲ್ ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಳೆ ಪೊಲೀಸರು ಮೂವರು ಡಿಎಂಕೆ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಸೆ. 12ರಂದು ಸಿಎಂ ಭಾಷಣದ ವಿರುದ್ಧ ಸೈದಾಪೇಟೆಯಲ್ಲಿ ನಡೆದ ಡಿಎಂಕೆ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ ಸಚಿವ ಪಿ.ಕೆ.ಶೇಖರಬಾಬು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಚೆನ್ನೈ ನಾರ್ತ್ ಬೀಚ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅದೇ ಸಭೆಯಲ್ಲಿ ಸಚಿವ ಟಿ.ನಿರ್ಮಲ್ ಕುಮಾರ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಮೇಲೆ ಸಂಸದ ಎ.ರಾಜಾ ವಿರುದ್ಧ ಸೈದಾಪೇಟೆ ಪೊಲೀಸರು ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.
ಕಲ್ಲಕುರ್ಚಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ರಿಷಿವಂಧಿಯಂ ಡಿಎಂಕೆ ಶಾಸಕ ವಸಂತಂ ಕಾರ್ತಿಕೇಯನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಏತನ್ಮಧ್ಯೆ, ಅದೇ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಡಲೂರು ಪೊಲೀಸರು ಶೇಖರಬಾಬು, ರಾಜ ಮತ್ತು ಕಾರ್ತಿಕೇಯನ್ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ ಎನ್ನಲಾಗಿದೆ.
ಪ್ರತಿಭಟನೆಗಳಲ್ಲಿ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದ ದೂರುಗಳ ಆಧಾರದ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ಭಾಗವಾಗಿ ಪೊಲೀಸರು ದೂರುಗಳು, ಭಾಷಣಗಳ ವೀಡಿಯೊ ರೆಕಾರ್ಡಿಂಗ್ಗಳು ಮತ್ತು ಲಭ್ಯವಿರುವ ಇತರ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ (ಏಜೆನ್ಸೀಸ್).