ಜಂತರ್-ಮಂತರ್ ಹೋರಾಟದಿಂದ ದೂರವಿರುವಂತೆ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಖಡಕ್ ಆದೇಶ
- ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಶುಕ್ರವಾರ ದೇಶಾದ್ಯಂತ ಬೃಹತ್ ಪ್ರತಿಭಟನೆ
- ಜಂತರ್-ಮಂತರ್ ಹೋರಾಟದಿಂದ ದೂರವಿರುವಂತೆ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಖಡಕ್ ಆದೇಶ
- ನಿಯಮ ಮೀರಿದರೆ ಕ್ರಿಮಿನಲ್ ಕೇಸ್ ದಾಖಲಾಗುವ ಎಚ್ಚರಿಕೆ
ನವದೆಹಲಿ: ನೀಟ್ ಸೇರಿದಂತೆ ದೇಶದಲ್ಲಿ ನಡೆಯವ ಪರೀಕ್ಷಾ ಅಕ್ರಮವನ್ನು ವಿರೋಧಿಸಿ ಶುಕ್ರವಾರ (ಜು.24) ಕಾಕ್ರೋಚ್ ಜನತಾ ಪಾರ್ಟಿ ದೇಶಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಆದರೆ ಈ ಪ್ರತಿಭಟನೆಯಿಂದ ಹೊರ ಉಳಿಯುವಂತೆ, ದೆಹಲಿ ವಿಶ್ವವಿದ್ಯಾಲಯ (Delhi University Warning to Students) ತನ್ನ ವಿದ್ಯಾರ್ಥಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ.
ಜಂತರ್-ಮಂತರ್ನಿಂದ ದೂರವಿರಿ!
ಶುಕ್ರವಾರ ದೇಶದ್ಯಂತ ಪ್ರತಿಭಟನೆಗೆ ಸಿಜೆಪಿ ಕರೆಕೊಟ್ಟಿರುವ ಹಿನ್ನಲೆ, ದೆಹಲಿಯಲ್ಲಿ ಇಂದು ಪರಿಸ್ಥಿತಿ ಉದ್ವಿಗ್ನತೆಗೆ ಮತ್ತೊಮ್ಮೆ ಸಾಕ್ಷಿಯಾಗಲಿದೆ. ಆದ್ದರಿಂದ ಈ ಪ್ರತಿಭಟನೆ ನಡೆಯಲಿರುವ ಜಂತರ್ ಮಂತರ್ನಿಂದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಆಚೆ ಇರುವಂತೆ ಎಕ್ಸ್ನಲ್ಲಿ ಆದೇಶ ಹೊರಡಿಸಲಾಗಿದೆ.
ಈ ಪ್ರತಿಭಟನೆಯನ್ನು ಸುಪ್ರೀಂ ಕೋರ್ಟ್ ಗಮನಿಸುತ್ತಿದ್ದು, ಅಲ್ಲಿ ಏನಾದರೂ ಕಾನೂನು ಬಾಹಿರ ಘಟನೆ ಸಂಭವಿಸಿದರೆ ಭಾಗಿಯಾದ ಮಕ್ಕಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ. ಇದರಿಂದ ನಿಮ್ಮ ಭವಿಷ್ಯ ಹಾಳಾಗುವ ಸಂಭವ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಿಜೆಪಿ ಇಂದ ದೇಶಾದ್ಯಂತ ಪ್ರತಿಭಟನೆ!
ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮವನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ ದೇಶಾದ್ಯಂತ ಹೋರಾಟಕ್ಕೆ ಕರೆ ನೀಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಈ ಹೋರಾಟ ನಡೆಯಲಿದ್ದು, ಈ ಹೋರಾಟಕ್ಕೆ ದೇಶದ ಜನತೆ ಬೆಂಬಲ ನೀಡಿ ಎಂದು ಸಿಜೆಪಿ ಮನವಿ ಮಾಡಿದೆ.
ಉಪವಾಸ ನಿಲ್ಲಿಸಿದ ವಾಂಗ್ಚುಕ್!
ನೀಟ್ ಪರೀಕ್ಷೆಯಲ್ಲಾದ ಅಕ್ರಮವನ್ನು ವಿರೋಧಿಸಿ ಕಳೆದ 26 ದಿನಗಳಿಂದ ಉಪವಾಸ ನಡೆಸುತ್ತಿದ್ದ ಪರಿಸರವಾದಿ ಸೋನಮ್ ವಾಂಗ್ಚುಕ್ ತಮ್ಮ ಉಪವಾಸವನ್ನು ಹಿಂಪಡೆದಿದ್ದಾರೆ. ಸರ್ಕಾರ ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮದ ಭರವಸೆ ನೀಡಿದ್ದು, ನನಗೆ ಸರ್ಕಾರದ ಮೇಲೆ ನಂಬಿಕೆಯಿದೆ, ಹೀಗಾಗಿ ಉಪವಾಸವನ್ನು ಹಿಂಪಡೆದಿರುವುದಾಗಿ ವಾಂಗ್ಚುಕ್ ಹೇಳಿದ್ದಾನೆ, (ಏಜನ್ಸೀಸ್).