ದೇಶ

ಆರ್‌ಜಿ ಕರ್ ಕಾಲೇಜು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್​ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ | RG Kar College

2024ರಲ್ಲಿ ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ಅ. 16) ಜಾಮೀನು ಮಂಜೂರು ಮಾಡಿದೆ.

ನವದೆಹಲಿ: 2024ರಲ್ಲಿ ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದರ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ(ಅ. 16) ಜಾಮೀನು ಮಂಜೂರು ಮಾಡಿದೆ.

ಕಾಲೇಜು ಮತ್ತು ಆಸ್ಪತ್ರೆಯ ಹಣಕಾಸಿನ ಅಕ್ರಮಗಳು ಮತ್ತು ಅರ್ಹರಲ್ಲದ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಮೆರಿಟ್ ಅಂಕಗಳನ್ನು ತಿದ್ದಿದ ಆರೋಪದ ಕೇಂದ್ರೀಯ ತನಿಖಾ ದಳ (ಸಿಬಿಐ) ನಡೆಸಿದ್ದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಪ್ರಕರಣದಲ್ಲಿ ಅವರ 2 ವರ್ಷಗಳ ಕಾಲ ದೀರ್ಘಕಾಲದ ಸೆರೆವಾಸ ಮತ್ತು ವಿಚಾರಣೆಯ ನಿಧಾನಗತಿಯ ಪ್ರಗತಿಯನ್ನು ಗಣನೆಗೆ ತೆಗೆದುಕೊಂಡ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದ್ರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಪೀಠವು, ಸಂದೀಪ್ ಘೋಷ್​ ಬಿಡುಗಡೆಗೆ ಆದೇಶ ನೀಡಿದೆ.

2026 ಫೆಬ್ರವರಿ 23ರಂದು ಕೋಲ್ಕತ್ತಾ ಹೈಕೋರ್ಟ್ ನೀಡಿದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಆದೇಶವನ್ನು ಪ್ರಶ್ನಿಸಿದ ಘೋಷ್ ಅವರ ಮೇಲ್ಮನವಿಯನ್ನು ಅಂಗೀಕರಿಸಿದ ಪೀಠವು, ಆದೇಶವನ್ನು ರದ್ದುಗೊಳಿಸಿತು. ಸಂಬಂಧಿತ ವಿಚಾರಣಾ ನ್ಯಾಯಾಲಯವು ಸೂಚಿಸಿದ ನಿಯಮಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಘೋಷ್ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ (ಏಜೆನ್ಸೀಸ್).