ಅಪರಾಧಿ ಮಾಜಿ ಶಾಸಕ ಕುಲದೀಪ್ ಸಿಂಗ್ 
ದೇಶ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್​ಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ | Unnao rape case

ನವದೆಹಲಿ: 2017ರಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ(Unnao rape case) ಸಂಬಂಧಿಸಿದಂತೆ ಅಪರಾಧಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್​​ ಅವರ ಜೀವಾವಧಿ ಶಿಕ್ಷೆ ರದ್ದುಗೊಳಿಸಿ, ಜಾಮೀನು ನೀಡಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಇಂದು(ಡಿ. 29) ಸುಪ್ರೀಂಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿದ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ನೇತೃತ್ವದ ತ್ರಿಸದಸ್ಯ ಪೀಠ, ವಿಚಿತ್ರ ಸಂಗತಿಗಳ ದೃಷ್ಟಿಯಿಂದ, ಅಪರಾಧಿ ಪ್ರತ್ಯೇಕ ಅಪರಾಧಕ್ಕಾಗಿ ಶಿಕ್ಷೆಗೊಳಗಾದಾಗ ಡಿ. 23ರ ದೆಹಲಿ ಹೈಕೋರ್ಟ್​ನ ಆದೇಶವನ್ನು ತಡೆಹಿಡಿಯಲಾಗಿದೆ. ಈ ಆದೇಶ ಪ್ರಕಾರ ಅಪರಾಧಿಯನ್ನು ಸೆಂಗಾರ್ ಅವರನ್ನು ಬಿಡುಗಡೆ ಮಾಡುವಂತಿಲ್ಲ ಎಂದು ಹೇಳಿದೆ. ಹಾಗೆಯೇ ಸೆಂಗಾರ್‌ಗೆ ನೋಟಿಸ್ ಜಾರಿ ಮಾಡಿದೆ.
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ವಯಸ್ಕಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಸೆಂಗಾರ್ ಅವರಿಗೆ 2019ರಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು. ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವಿನ ಪ್ರಕರಣದಲ್ಲಿ ಸೆಂಗಾರ್ ಏಕಕಾಲದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ (ಏಜೆನ್ಸೀಸ್).