IND Vs USA | ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್
ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಅಮೆರಿಕ ಮತ್ತು ಭಾರತ ನಡುವಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಘಾತಗಳ ನಡುವೆಯೂ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav ) ಸಮಯೋಚಿತ ಆಟದ ಬ್ಯಾಟಿಂಗ್ ನೆರವಿನಿಂದ ಸವಾಲಿನ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ.
360 ಡಿಗ್ರಿ ಖ್ಯಾತಿಯ ಸೂರ್ಯಕುಮಾರ್ ಯಾದವ್ ಮತ್ತೊಮ್ಮೆ ತಂಡದ ಸಂಕಷ್ಟದ ಸಮಯದಲ್ಲಿ ಆಪದ್ಬಾಂಧವರಾಗಿ ಮೂಡಿಬರುವ ಮೂಲಕ ಕೇವಲ 49 ಎಸೆತಗಳಲ್ಲಿ ಅಜೇಯ 84 ರನ್ ಸಿಡಿಸಿ ಟೀಮ್ ಇಂಡಿಯಾ 162 ರನ್ ಗುರಿ ನೀಡಲು ಕಾರಣರಾದರು.
ಆರಂಭಿಕ ಆಘಾತ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತಕ್ಕೆ ಯುಎಸ್ಎ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಪ್ರಮುಖ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲರಾದರು. ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ಸೂರ್ಯಕುಮಾರ್ ಯಾದವ್, ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ 84 ರನ್‌ಗಳ ಕೊಡುಗೆ ನೀಡಿದರು.
ಭಾರತದ ಸ್ಕೋರ್ ಕಾರ್ಡ್
ಸೂರ್ಯಕುಮಾರ್ ಯಾದವ್ 84 (49)
ಯುಎಸ್ಎ ವೇಗಿ ಶಾಡ್ಲಿ ವ್ಯಾನ್ ಸ್ಚಾಲ್ಕ್ವಿಕ್ ನಿಗದಿತ 4 ಓವರ್‌ಗಳಲ್ಲಿ 25 ರನ್ ನೀಡಿ 4 ಪ್ರಮುಖ ವಿಕೆಟ್ ಕಬಳಿಸುವ ಮೂಲಕ ಭಾರತದ ಮಧ್ಯಂತರ ಕ್ರಮಾಂಕವನ್ನು ಧೂಳೀಪಟ ಮಾಡಿದರು(ಏಜೆನ್ಸೀಸ್).