Suvendu Adhikari (ಚಿತ್ರ X)
- ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಒಂದು ದೊಡ್ಡ ಸಂಚಲನ ಮೂಡಿದೆ
- ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಡಳಿತಕ್ಕೆ ತೆರೆ ಬಿದ್ದ ಬೆನ್ನಲ್ಲೇ ಹೊಸ ನಾಯಕನ ಆಯ್ಕೆ ಬಗ್ಗೆ ಚರ್ಚೆ
- ಈ ಹಂತದಲ್ಲಿ ಸುವೇಂದು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಒಂದು ದೊಡ್ಡ ಸಂಚಲನ ಮೂಡಿದ್ದು, ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಡಳಿತಕ್ಕೆ ತೆರೆ ಬಿದ್ದ ಬೆನ್ನಲ್ಲೇ ಹೊಸ ನಾಯಕನ ಆಯ್ಕೆಯ ಕುರಿತು ಚರ್ಚೆಗಳು ಆರಂಭವಾಗಿವೆ. ಈ ಹಂತದಲ್ಲಿ (Suvendu Adhikari) ಸುವೇಂದು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿಗೆ ನಡೆದ ರಾಜ್ಯ ಚುನಾವಣೆಯಲ್ಲಿ ಪಕ್ಷ ಭರ್ಜರಿ ಜಯ ಸಾಧಿಸಿದ ಬಳಿಕ ಸರ್ಕಾರ ರಚನೆ ಕುರಿತು ಚರ್ಚಿಸಲು ಶುಕ್ರವಾದ (ಮೇ.8) ಕೊಲ್ಕತ್ತಾದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಯಲಿರುವುದರಿಂದ ಪಕ್ಷದ ರಾಜ್ಯ ಪ್ರಧಾನ ಕಚೇರಿಯು 207 ವಿಜೇತ ಅಭ್ಯರ್ಥಿಗಳನ್ನು ಸ್ವಾಗತಿಸಲು ಸಾಧ್ಯವಾಗದಿರಬಹುದು. ಈ ಕಾರಣದಿಂದ ಸಭೆಯನ್ನು ಆಯೋಜಿಸಲಿ ಸ್ಥಳವನ್ನು ಹುಡುಕುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ಸಭೆಯಲ್ಲಿ, ಸುವೇಂದು ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಚುನಾವಣೆಯನ್ನು ಸರಳವಾಗಿ ಕೈ ಎತ್ತುವ ಮೂಲಕ ನಡೆಸಲಾಗುತ್ತಿದ್ದು, ಈ ವೇಳೆ ಬಿಜೆಪಿಯ ರಾಜ್ಯ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅಧಿಕಾರಿ ಅವರ ಹೆಸರನ್ನು ಪ್ರಸ್ತಾಪಿಸಲಿದ್ದು, ಗೃಹ ಸಚಿವ ಅಮಿತ್ ಶಾ ಶಾಸಕಾಂಗ ಪಕ್ಷದ ನಾಯಕರಾಗಿ ಅವರನ್ನು ಘೋಷಿಸಲಿದ್ದಾರೆ ಎಂದು ಹೇಳಿದರು.
ನಂತರ ಸುವೇಂದು ಅಧಿಕಾರಿ, ಭಟ್ಟಾಚಾರ್ಯ ಮತ್ತು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಅವರು ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭವು ಒಂದು ದಿನದ ನಂತರ ಶನಿವಾರ (ಮೇ 9) ನಡೆಯಲಿದೆ ಎಂದು ಭಟ್ಟಾಚಾರ್ಯ ದೃಢಪಡಿಸಿದ್ದಾರೆ. ಇದು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಅವರ ಜನ್ಮ ದಿನಾಚರಣೆಯಾದ ರವೀಂದ್ರ ಜಯಂತಿಯೊಂದಿಗೆ ಹೊಂದಿಕೆಯಾಗಲಿದೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಒಂದು ಹೊಸ ಆರಂಭವನ್ನು ಸೂಚಿಸುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಇತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಇತರ ಹಿರಿಯ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ (ಏಜೆನ್ಸೀಸ್).