IND vs ENG: ಇಂಗ್ಲೆಂಡ್ನ ಸೌತಾಂಪ್ಟನ್‌ನ ದಿ ರೋಸ್ ಬೌಲ್‌ನಲ್ಲಿ ಇಂದು(ಜು. 11) ನಡೆದ ಭಾರತ-ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಬ್ಯಾಟಿಂಗ್ ನಡೆಸಿದ್ದು, 20 ಓವರ್‌ನಲ್ಲಿ 3 ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿ ಭಾರತಕ್ಕೆ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ.
ಟಾಸ್ ಗೆದ್ದ ಭಾರತದ ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಪರ ಜೋಸ್ ಬಟ್ಲರ್ 64 ಎಸೆತಗಳಲ್ಲಿ 12 ಬೌಂಡರಿಗಳು ಮತ್ತು ಎಂಟು ಸಿಕ್ಸರ್‌ಗಳನ್ನು ಹೊಡೆದು 131 ರನ್ ಗಳಿಸಿದ್ರೆ, ಹ್ಯಾರಿ ಬ್ರೂಕ್ 45 ಎಸೆತಗಳಲ್ಲಿ 4 ಬೌಂಡರಿ 8 ಸಿಕ್ಸರ್‌ಗಳನ್ನು ಹೊಡೆದು 95 ರನ್ಗಳಿಗೆ ತಂಡ ಬೃಹತ್ ಮೊತ್ತ ಕಲೆಹಾಕಲು ಸಹಾಯ ಮಾಡಿದರು.
ಭಾರತದ ಬೌಲರ್ಗಳನ್ನು ಸಿಕ್ಕಾಪಟ್ಟೆ ಚಚ್ಚಿದ ಇಂಗ್ಲೆಂಡ್ ಬ್ಯಾಟರ್ಗಳು, ಆದರೆ ಶಿವಂ ದುಬೆ ಒಂದು ಓವರ್‌ನಲ್ಲಿ 22 ರನ್‌ಗಳನ್ನು ಬಿಟ್ಟುಕೊಟ್ಟು ಎರಡು ವಿಕೆಟ್ ಪಡೆದರು. ಇನ್ನೂ ಪಂದ್ಯ ಆರಂಭಕ್ಕೂ ಮುನ್ನ ಭಾರತೀಯ ಆಟಗಾರರಿದ್ದ ಬಸ್ ಟ್ರಾಫಿಕ್ನಲ್ಲಿ ಸಿಲುಕಿದ ಕಾರಣ ಪಂದ್ಯ ಒಂದು ತಾಸು ತಡವಾಗಿ ಆರಂಭವಾಯಿತು (ಏಜೆನ್ಸೀಸ್).